logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ: ಮಕ್ಕಳೊಂದಿಗೆ ತಾಯಿ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
10 Dec 2024
post image

ಉಡುಪಿ, ಡಿಸೆಂಬರ್ 10: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಕಾಣೆಯಾದವರ ಚಹರೆ: ಲಕ್ಷ್ಮವ್ವ ಕುಮಾರ ಮಾಳವತ್ತರ ಅವರು 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ. ಅಪೂರ್ವ 3 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ, ಶ್ರೇಯಾ 3 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮತ್ತು ಮನೋಜ್ 2 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.