



ಉಡುಪಿ: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಸರ್ಕಾರದ ಯೋಜನೆಗೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ವಿರೋಧ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಅವರು, ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಆದರೆ, ಮಕ್ಕಳಿಗೆ ತಿಳುವಳಿಕೆ ಇರುವುದಿಲ್ಲ. ಪರಂಪರೆಯಿಂದ ಬಂದ ಆಹಾರ ಕ್ರಮವನ್ನು ಬದಲಿಸಬಾರದು. ಸರಕಾರ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ರವಾನೆಯಾಗುತ್ತದೆ ಎಂದರು. ಸರಕಾರ ಮಕ್ಕಳಲ್ಲಿ ತಾರತಮ್ಯ ಮಾಡಬಾರದು. ಶಾಲೆ ಇರುವುದು ವಿದ್ಯಾಭ್ಯಾಸ ಮಾಡಲು. ಹೀಗಾಗಿ ಅಲ್ಲಿ ಜೀವನಶೈಲಿಯನ್ನು ಬದಲಿಸುವ ಕೆಲಸವನ್ನು ಸರಕಾರ ಮಾಡಬಾರದು ಎಂದು ಹೇಳಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.