logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ ನಗರಸಭೆ: ಕುಡಿಯುವ ನೀರಿನ ದರ ಪರಿಷ್ಕರಣೆ

ಟ್ರೆಂಡಿಂಗ್
share whatsappshare facebookshare telegram
7 Oct 2023
post image

ಉಡುಪಿ: ಉಡುಪಿ ನಗರಸಭೆಯ ವತಿಯಿಂದ ಕುಡಿಯುವ ನೀರಿನ ಬಳಕೆಯ ಶುಲ್ಕವನ್ನು ಪರಿಷ್ಕರಿಸಿ, ದರ ಏರಿಕೆ ಮಾಡಲಾಗಿದೆ. ಸರಕಾರದ ಆದೇಶದಂತೆ ಕುಡಿಯುವ ನೀರಿನ ದರವನ್ನು ಪ್ರತಿ 3 ವರ್ಷಕ್ಕೊಮ್ಮೆ ಪರಿಷ್ಕರಿಸಬೇಕಿದ್ದು, ಕಳೆದ 12 ವರ್ಷಗಳಲ್ಲಿ ದರವನ್ನು ಪರಿಷ್ಕರಿಸಲಾಗಿರುವುದಿಲ್ಲ. ಪ್ರಸ್ತುತ ವಿದ್ಯುತ್, ಇತರೇ ನಿರ್ವಹಣಾ ವೆಚ್ಚಗಳು ಅಧಿಕವಾಗಿರುವುದರಿಂದ ದರವನ್ನು ಪರಿಷ್ಕರಿಸುವುದು ಅನಿವಾರ್ಯವಾಗಿದ್ದು, ನವೆಂಬರ್ 1 ರಿಂದ ಅನ್ವಯವಾಗುವಂತೆ ಕುಡಿಯುವ ನೀರಿನ ಬಳಕೆ ಶುಲ್ಕವನ್ನು ಈ ಕೆಳಕಂಡಂತೆ ಪರಿಷ್ಕರಿಸಲಾಗುವುದು. ಒಂದು ಸಾವಿರ ಲೀಟರ್ ನೀರು: ಗೃಹ ಬಳಕೆಗೆ 8 ಸಾವಿರ ಲೀ. ವರೆಗೆ 11 ರೂ., 8 ಸಾವಿರ ಲೀ. ಮೇಲ್ಪಟ್ಟು ಬಳಕೆಯಾದಲ್ಲಿ 15 ರೂ., 15 ಸಾವಿರ ಲೀ. ಮೇಲ್ಪಟ್ಟು ಬಳಕೆಯಾದಲ್ಲಿ 20 ರೂ. ಹಾಗೂ 20,000 ಲೀ. ಗಿಂತ ಅಧಿಕ ಬಳಕೆಯಾದಲ್ಲಿ 30 ರೂ. ವಿಧಿಸಲಾಗುವುದು. ಗೃಹೇತರ ಬಳಕೆಗೆ 8 ಸಾವಿರ ಲೀ. ವರೆಗೆ 25 ರೂ., 8 ಸಾವಿರ ಲೀ. ಮೇಲ್ಪಟ್ಟು ಬಳಕೆಯಾದಲ್ಲಿ 35 ರೂ., 15 ಸಾವಿರ ಲೀ. ಮೇಲ್ಪಟ್ಟು ಬಳಕೆ ಮಾಡಿದ್ದಲ್ಲಿ 50 ರೂ., ವಿಧಿಸಲಾಗುವುದು. ವಾಣಿಜ್ಯ/ ಕೈಗಾರಿಕೆಗೆ 8 ಸಾವಿರ ಲೀ. ವರೆಗೆ 50 ರೂ., 8 ಸಾವಿರ ಲೀ. ಮೇಲ್ಪಟ್ಟು ಬಳಕೆ ಮಾಡಿದ್ದಲ್ಲಿ 60 ರೂ. ಹಾಗೂ 15,000 ಲೀ. ಮೇಲ್ಪಟ್ಟು ಬಳಕೆ ಮಾಡಿದ್ದಲ್ಲಿ 70 ರೂ. ವಿಧಿಸಲಾಗುವುದು. ಪ್ರತೀ ಸಂಪರ್ಕಕ್ಕೆ ಗೃಹ ಬಳಕೆಗೆ 88 ರೂ. ಗೃಹೇತರ ಸಂಪರ್ಕಕ್ಕೆ 200 ರೂ. ಹಾಗೂ ವಾಣಿಜ್ಯ/ ಕೈಗಾರಿಕೆಗಳ ಸಂಪರ್ಕಕ್ಕೆ 400 ರೂ. ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.