



ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಯೋಜನೆಯಲ್ಲಿ ಭರತಾಂಜಲಿ, ಕಡಿಯಾಳಿ ಆಶ್ರಯದಲ್ಲಿ ಇತ್ತಿಚೆಗೆ ನಿಧನರಾದ ಖ್ಯಾತ ಸಂಗೀತ ನಿರ್ದೇಶಕ ನಾದವೈಭವಂ ಉಡುಪಿ ವಾಸುದೇವ ಭಟ್ ರವರಿಗೆ ನುಡಿನಮನ ಸಲ್ಲಿಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷ ಶ್ರೀ ನೀಲಾವರ ಸುರೇಂದ್ರ ಅಡಿಗ, ಸುಹಾಸಂ ಉಡುಪಿ ಅಧ್ಯಕ್ಷ ಶ್ರೀ ಶಾಂತರಾಜ ಐತಾಳ್, ನಿವೃತ್ತ ಬ್ಯಾಂಕ್ ಅಧಿಕಾರಿ ಶ್ರೀ ನರಸಿಂಹ ಮೂರ್ತಿ ಹಾಗು ಭಟ್ಟರ ಅಭಿಮಾನಿಗಳು ಭಾಗವಹಿಸಲಿದ್ದಾರೆ.
ದಿನಾಂಕ 17.1.2022, ಸೋಮವಾರ, ಸಂಜೆ ಗಂಟೆ 05.00ಕ್ಕೆ ಕಡಿಯಾಳಿಯ ಭರತಾಂಜಲಿ ಕಚೇರಿಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ ಹಾಗು ನರೇಂದ್ರ ಕುಮಾರ್ ಕೋಟ ಪ್ರಕಟಣೆೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.