logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ನ. 13 ರಂದು ಮಿನಿ ಉದ್ಯೋಗ ಮೇಳ..!

ಟ್ರೆಂಡಿಂಗ್
share whatsappshare facebookshare telegram
11 Nov 2024
post image

ಉಡುಪಿ, ನವೆಂಬರ್ 11: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್ 13 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್, ಗ್ರಾಫಿಕ್ ಡಿಸೈನ್, (ಕಂಪ್ಲಿಟೇಡ್ ಪೋಟೋ ಶ್ಯಾಪ್ ಕೋರ್ಸ್) ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ, 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.