



ಉಡುಪಿ: ಜಿಲ್ಲೆಯ ನಿರುದ್ಯೋಗ ಯುವಕ ಹಾಗೂ ಯುವತಿಯರಿಗೆ ಸರ್ಕಾರಿ ಉದ್ಯೋಗ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಯು ಅಗತ್ಯವಿರುವುದರಿಂದ, ಉಡುಪಿ ಜಿಲ್ಲಾ ಪಂಚಾಯತ್ ಸ್ಟುಡಿಯೋದಿಂದ ಅಕ್ಟೋಬರ್ 4 ರಿಂದ ಪ್ರತಿ ದಿನ ಸಂಜೆ 5.30 ರಿಂದ 7 ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಆನ್‌ಲೈನ್ ತರಬೇತಿಯನ್ನು ನೀಡಲಾಗುವುದು. ತರಬೇತಿಯನ್ನು ಪಡೆಯಲಿಚ್ಛಿಸುವವರು ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಹಾಜರಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಈ ಕುರಿತು ಮಾಹಿತಿಗಾಗಿ ಉಡುಪಿ ನಗರಸಭೆಯನ್ನು ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.