logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಬಿ.ಇಡಿ ಕೋರ್ಸಿನ ಅಭ್ಯರ್ಥಿಗಳ ಮೂಲದಾಖಲೆ ಪರಿಶೀಲನೆ

ಟ್ರೆಂಡಿಂಗ್
share whatsappshare facebookshare telegram
30 Dec 2023
post image

ಉಡುಪಿ: ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಾಂಗಕ್ಕಾಗಿ ಸರ್ಕಾರಿ ಕೋಟಾದ ಸೀಟುಗಳ ಮೊದಲ ಸುತ್ತಿನ ದಾಖಲಾತಿಗಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಚಲನ್ ‌ಅನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು, ನಿಗಧಿತ ಶುಲ್ಕವನ್ನು ಎಸ್.ಬಿ.ಐ ನಲ್ಲಿ ಪಾವತಿಸಿ, ಡಿಸೆಂಬರ್ 30 ರಿಂದ ಜನವರಿ 3 ರ ಒಳಗೆ ಶುಲ್ಕ ಪಾವತಿಸಿದ ಚಲನ್ ಪ್ರತಿಯೊಂದಿಗೆ ಉಡುಪಿ ಡಯಟ್‌ನ ನೋಡೆಲ್ ಕೇಂದ್ರಕ್ಕೆ ಸಲ್ಲಿಸಿ, ಪ್ರವೇಶ ಪತ್ರವನ್ನು ಪಡೆಯಬಹುದಾಗಿದೆ.

ಗೈರು ಹಾಜರಾದ ವಿದ್ಯಾರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯು ಜನವರಿ 2 ರಿಂದ 6 ರ ವರೆಗೆ ನೋಡೆಲ್ ಕೇಂದ್ರದಲ್ಲಿ ನಡೆಯಲಿದ್ದು, ಅಭ್ಯರ್ಥಿಗಳು ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಯಟ್ ಉಡುಪಿ ಉಪನ್ಯಾಸಕಿ ಹಾಗೂ ಜಿಲ್ಲಾ ನೋಡೆಲ್ ಅಧಿಕಾರಿ ಪ್ರವೀಣ ಕುಮಾರಿ ಮೊ.ನಂ: 9481211471 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.