



ಉಡುಪಿ : ಕೋವೀಡ್ ಸಾಂಕ್ರಮಿಕದಿಂದ ದಿ: 11-03-2020ರ ನಂತರ ಇಬ್ಬರು ಪೋಷಕರನ್ನೂ/ಉಳಿದ ಪೋಷಕರನ್ನು(Surviving Parent)ನ್ನು/ಕಾನೂನುಬದ್ಧ/ದತ್ತು ಪೋಷಕರನ್ನು ಕಳೆದುಕೊಂಡಿರುವ 18 ವರ್ಷದೊಳಗಿನ ಮಕ್ಕಳಿಗೆ ಪಾಲನೆ ಮತ್ತು ರಕ್ಷಣೆ ಒಳಗೊಂಡಂತೆ ಅವರ ಆರೋಗ್ಯ ವಿಮೆ, ಶಿಕ್ಷಣ ಮತ್ತು ಸಮಾಜದಲ್ಲಿ ಸ್ವಾವಲಂಬಿಯಾಗಿ ಜೀವನ ನಿರ್ವಹಿಸಲು ಅನುವಾಗುವಂತೆ ತಕ್ಷಣ ನೆರವು ಜೊತೆಗೆ ಪ್ರತೀ ಮಗುವಿಗೆ 23 ವರ್ಷ ತುಂಬಿದ ನಂತರ ತಲಾ ರೂ 10.00ಲಕ್ಷಗಳನ್ನು ನೀಡಲು ಸನ್ಮಾನ್ಯ ಪ್ರಧಾನ ಮಂತ್ರಿಗಳು PM CARE FOR CHILDREN ಹೊಸ ಯೋಜನೆಯನ್ನು ಘೋಷಿಸಿರುತ್ತಾರೆ. ಈ ಯೋಜನೆಗೆ ಅರ್ಹವಿರುವ ಫಲಾನುಭವಿಗಳು ನೇರವಾಗಿ https://pmcaresforchildren.in ಪೋರ್ಟಲ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಥವಾ ನಿಗದಿತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ/ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಸದರಿ ಯೋಜನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬಿ ಬ್ಲಾಕ್ ಒಂದನೇ ಮಹಡಿ ಜಿಲ್ಲಾಧಿಕಾರಿಗಳ ಸಂಕೀರ್ಣ ರಜತಾದ್ರಿ ಮಣಿಪಾಲ ಉಡುಪಿ ದೂ: 0820-2574964 ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.