



ಉಡುಪಿ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಆನ್‌ಲೈನ್ ತರಬೇತಿ ಆಯೋಜಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವ್ಯವಸ್ಥೆ ಮಾಡಿಕೊಂಡಿದ್ದು, ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ಸಾಮಾನ್ಯ ಜ್ಞಾನ ಪತ್ರಿಕೆಯ ಆನ್‌ಲೈನ್ ತರಬೇತಿಯನ್ನು ಪ್ರಯೋಗಿಕವಾಗಿ ಅಕ್ಟೋಬರ್ 9 ರಂದು ಸಂಜೆ 5.30 ಕ್ಕೆ ಆರಂಭಿಸಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿಚ್ಚಿಸುವ ಅಭ್ಯರ್ಥಿಗಳು https://udupi-spardha.com ಮೂಲಕ ಆಥವಾ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ಹಾಗೂ ಹೆಸರು ನೊಂದಾಯಿಸಿರುವ ಅಭ್ಯರ್ಥಿಗಳು ನೋಟ್ ಪುಸ್ತಕದೊಂದಿಗೆ ಅ. 9 ರಂದು ಸಂಜೆ 5.30 ಕ್ಕೆ ಸಂಬAಧ ಪಟ್ಟ ಗ್ರಾಮ ಪಂಚಾಯತ್ ಅಥವಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಜರಿದ್ದು ಆನ್‌ಲೈನ್ ತರಬೇತಿ ಸೌಲಭ್ಯ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.