



ಉಡುಪಿ: ಪ್ರಮೋದ್ ಮಧ್ವರಾಜ್ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಬೃಹತ್ ರಕ್ತದಾನ ಶಿಬಿರಕಾರ್ಯಕ್ರಮ ಇಂದು ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಿತು. ಸಾರ್ವಜನಿಕರು, ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ 220 ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.ಇದೇ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ,ನಾಯಕರಾದ ಜನಾರ್ದನ ತೋನ್ಸೆ, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರಾ, ಸತೀಶ್ ಅಮೀನ್ ಪಡುಕೆರೆ, ಪ್ರಶಾಂತ್ ಪೂಜಾರಿ, ಗಣೇಶ್ ನೇರ್ಗಿ ಹಾಗೂ ಇತರ ನಾಯಕರು ಭಾಗಿಯಾಗಿದ್ದರು.


ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.