logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ: ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ ಮಕ್ಕಳ ರಕ್ಷಣೆ..!

ಟ್ರೆಂಡಿಂಗ್
share whatsappshare facebookshare telegram
9 Feb 2024
post image

ಉಡುಪಿ: ನಗರದ ಚಿತ್ತರಂಜನ್ ಸರ್ಕಲ್ ಬಳಿ ಚಿನ್ನದ ಅಂಗಡಿಯೊ೦ದರಲ್ಲಿ ಬಾಲಕಾರ್ಮಿಕರು ದುಡಿಯುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಮೇರೆಗೆ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಮಹಿಳಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ನಾಗರಿಕ ಸಮಿತಿ ಇವರುಗಳು ಮಂಗಳವಾರ ಜಂಟಿ ಕಾರ್ಯಾಚರಣೆ ನಡೆಸಿ, ಚಿನ್ನದ ಅಂಗಡಿಯಲ್ಲಿ ಅಪಾಯಕಾರಿ ಉದ್ದಿಮೆಯಾದ ಚಿನ್ನಕ್ಕೆ ಹೊಳಪು ನೀಡುವ ಕೆಲಸದಲ್ಲಿ ನಿರತರಾಗಿದ್ದ 2 ಬಾಲಕಾರ್ಮಿಕ ಮತ್ತು 1 ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಿ, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಬಾಲಕರ ಬಾಲ ಮಂದಿರದಲ್ಲಿ ಪುನರ್ ವಸತಿ ಕಲ್ಪಿಸಲಾಯಿತು.

ರಕ್ಷಣಾ ಕಾರ್ಯಾಚರಣೆಯಲ್ಲಿ ಕಾರ್ಮಿಕ ಇಲಾಖೆಯ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮ್ರತಾ , ಕಾರ್ಮಿಕ ನಿರೀಕ್ಷಕ ಸಂಜಯ್, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಹೇಶ ಹಾಗೂ ಯೋಗೀಶ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ಜ್ಯೋತಿ ಹಾಗೂ ಪ್ರಕಾಶ್, ನಗರ ಠಾಣಾ ಪೊಲೀಸರು ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ಸಾರ್ಜನಿಕರು ತಮ್ಮ ಸುತ್ತಮುತ್ತಲ ಪ್ರದೇಶದಲ್ಲಿ ಕೆಲಸಕ್ಕೆ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡು ಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ- 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ-112 ಸಂಖ್ಯೆಗೆ ಕರೆ ಮಾಡಿ ಮಕ್ಕಳ ರಕ್ಷಣೆಗೆ ಸಹಕಾರ ನೀಡಬೇಕು. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಹಾಗೆಯೇ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ವಾರೆಂಟ್ ರಹಿತ ಬಂಧಿಸಬಹುದಾದ ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕನಿಷ್ಠ 6 ತಿಂಗಳಿAದ ಗರಿಷ್ಠ 2 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 20 ಸಾವಿರದಿಂದ 50 ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.