



ಉಡುಪಿ: ಪೊಲೀಸರ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಡಿಯಲ್ಲಿ 11 ಮಂದಿಯ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾದೀಕ್ ಅಹಮ್ಮದ್ (40), ಅಫ್ರೋಜ್ ಕೆ (39), ಇಲಿಯಾಸ್ ಸಾಹೇಬ್(46), ಇರ್ಷಾದ್ (37), ಫಯಾಜ್ ಅಹಮ್ಮದ್(39), ಮಹಮ್ಮದ್ ಅಶ್ರಫ್(43), ಎ. ಹಾರೂನ್ ರಶೀದ್, ಮೊಹಮ್ಮದ್ ಜುರೈಜ್ (42), ಇಶಾಕ್ ಕಿದ್ವಾಯಿ (30), ಶೌಕತ್‌ಅಲಿ (31) ಹಾಗೂ ಮಹಮ್ಮದ್ ಝಹೀದ್(24) ಎಂಬವರನ್ನು ವಶಕ್ಕೆ ಪಡೆದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ನಿನ್ನೆ ಸಂಜೆ ಉಡುಪಿಯ ಡಯಾನಾ ಸರ್ಕಲ್ ಬಳಿ ಪಿಎಫ್ ಐ ಸಂಘಟನೆಗಳ ಕಚೇರಿ ಹಾಗೂ ಮನೆಗಳ ಮೇಲೆ ಎನ್ಐಎ ದಾಳಿಯನ್ನು ಖಂಡಿಸಿ ಪಿ.ಎಫ್.ಐ ಕಾರ್ಯಕರ್ತರು ಯಾವುದೇ ಪರವಾನಿಗೆ ಇಲ್ಲದೆ ರಸ್ತೆ ತಡೆದು ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯುಂಟು ಮಾಡಿದ್ದು, ಸ್ಥಳಕ್ಕೆ ತೆರಳಿದ ಉಡುಪಿ ನಗರ ಠಾಣೆ ಪೊಲೀಸರು ಯಾವುದೇ ಪರವಾನಿಗೆ ಇಲ್ಲದ ಕಾರಣ ಪ್ರತಿಭಟನಾಕಾರರನ್ನು ಸ್ಥಳದಿಂದ ಹೋಗಲು ಸೂಚನೆ ನೀಡಿದ್ದಾರೆ. ಆದರೆ, ಕಾರ್ಯಕರ್ತರು ಸ್ಥಳದಿಂದ ತೆರಳದಿದ್ದಾಗ 11 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಮುಂದಿನ ವಿಚಾರಣೆ ನಡೆಯುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.