logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ: ಸಾರ್ವಜನಿಕರು ರಸ್ತೆ ಸುರಕ್ಷತೆಯ ನಿಯಮಗಳನ್ನು ತಪ್ಪದೇ ಪಾಲಿಸಿ: ಡಾ.ಕೃಷ್ಣ ಪ್ರಸಾದ್

ಟ್ರೆಂಡಿಂಗ್
share whatsappshare facebookshare telegram
21 Feb 2024
post image

ಉಡುಪಿ: ವಾಹನ ಚಾಲಕರು ಸಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಂಡು ರಸ್ತೆ ಅಪಘಾತವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು ಡಾ.ಕೃಷ್ಣ ಪ್ರಸಾದ್ ಹೇಳಿದರು. ಅವರು ಸೋಮವಾರ ನಗರದ ಪ್ರಾದೇಶಿಕ ಸಾರಿಗೆ ಕಛೇರಿ ಸಭಾಂಗಣದಲ್ಲಿ ಜಿಲಲಾಡಳಿತ, ಪ್ರಾದೇಶಿಕ ಸಾರಿಗೆ ಇಲಾಖೆ ಉಡುಪಿ ವತಿಯಿಂದ ಆಯೋಜಿಸಿದ ರಾಷ್ಟ್ರೀಯ ರಸ್ತೆ ಸುರಕ್ಷತೆಯ ಸಮಾರೋಪವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ, ಅಪಘಾತದಲ್ಲಿ ಮರಣ ಹಾಗೂ ತ್ರೀವತರ ಹಾನಿ ಉಂಟಾದ ಕುಟುಂಬ ವರ್ಗದವರು ಸಂಕಷ್ಟ ಅನುಭವಿಸುವುದು ನಾವು ಕಾಣುತ್ತಿದ್ದೇವೆ ರಸ್ತೆ ಸುರಕ್ಷತೆ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೇ ಪಾಲಿಸುವುದರೊಂದಿಗೆ ರಸ್ತೆ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಮುಂದಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿ.ಪಿ.ರವಿಶಂಕರ್, ಚಾಲಕರು ರಸ್ತೆಗಳಲ್ಲಿ ಎಡಬದಿಯಲ್ಲಿ ಚಲಿಸಬೇಕು. ವಿರುದ್ಧ ದಿಕ್ಕಿನಲ್ಲಿ ಚಲಿಸಬಾರದು. ಚಾಲನೆಯಲ್ಲಿ ಮೊಬೈಲ್ ಬಳಸಬಾರದು. ಸಾರ್ವಜನಿಕರು ರಸ್ತೆ ಸುರಕ್ಷತೆಯ ನಿಯಮಗಳನ್ನು ಅನುಸರಿಸಿ ಸುರಕ್ಷಿತ ಚಾಲನೆ ಮಾಡಬೇಕು ಎಂದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ:ವಿಜಯೇಂದ್ರ, ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಜಾಸ್ತಿಯಾಗಿದ್ದು ನಿಯಮಿತವಾಗಿ ವಾಹನಗಳನ್ನು ತಪಾಸಣೆ ಮಾಡಿಸಿ ಸುಸ್ಥಿತಿಯಲ್ಲಿಟ್ಟುಕೊಂಡು, ರಸ್ತೆ ಸುರಕ್ಷತೆಯ ನಿಯಮಗಳನ್ನು ಪಾಲಿಸುವಂತೆ ಈ ಸಂದರ್ಭದಲ್ಲಿ ರಸ್ತೆ ಸುರಕ್ಷತೆ ಕುರಿತು ಕಿರು ಚಿತ್ರವನ್ನು ಪದರ್ಶಿಸಿಲಾಯಿತು. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಕೈಪಿಡಿಯನ್ನು ಮತ್ತು ರಸ್ತೆ ಸುರಕ್ಷತೆ ಕುರಿತು ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು. ಕೃಷ್ಣ ಪ್ರಸಾದ್ ನೇತ್ರಾಲಯದವರಿಂದ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಭಾಸ್ಕರ್ ರಾವ್ ಪೇತ್ರಿ, ಕಛೇರಿಯ ಅಧೀಕ್ಷಕ ಪಮಿತ, ಡಾ.ಅತುಲ್ ,ಡಾ.ವಿಜೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಪ್ರಾದೇಶಿಕ ಸಾರಿಗೆ ಕಛೇರಿಯ ಶಾಂತರಾಜು, ಸ್ವಾಗತಿಸಿ, ಹಿರಿಯ ಮೋಟಾರು ವಾಹನ ನಿರೀಕ್ಷಕ ಸಂತೋಷ್ ಶೆಟ್ಟಿ ನಿರೂಪಿಸಿ. ಶಿಸುಧಾಂಶು ವಂದಿಸಿದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.