



ಉಡುಪಿ, :ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಹಜ್ ಭವನ ಇಲ್ಲಿ ಐ.ಎ.ಎಸ್ ಹಾಗೂ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಸೇವಾ-ಸಿಂಧು ತಂತ್ರಾಂಶತಂತ್ರಾಂಶ https://sevasindhu.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 25 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.