



ಉಡುಪಿ: ಸುಹಾಸಂ ಉಡುಪಿ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹಾಗೂ ಧಾತ್ರಿ ಪ್ರಕಾಶನ ಇದರ ಸಂಯುಕ್ತ ಆಶ್ರಯದಲ್ಲಿ ಎಸ್ ಉಮೇಶ್ ಅವರ ಕಾಶ್ಮೀರ್ ಡೈರಿ ಕೃತಿಯು ದಿನಾಂಕ 3 ಶನಿವಾರ ಸಂಜೆ 5:00 ಗಂಟೆಗೆ ಉಡುಪಿಯ ಹೋಟೆಲ್ ಕಿದಿಯೂರಿನ ಅನಂತಶಯನ ಹಾಲ್ ನಲ್ಲಿ ಡಾ. ಎಂ ಮೋಹನ್ ಆಳ್ವ ರವರು ಬಿಡುಗಡೆ ಮಾಡಲಿದ್ದಾರೆ .
ಕೃತಿ ಪರಿಚಯವನ್ನು ಹಿರಿಯ ಲೇಖಕ ಪ್ರೇಮ್ ಶೇಖರ ಅವರು ಮಾಡಲಿದ್ದು, ಸಭಾಧ್ಯಕ್ಷತೆಯನ್ನು ಸುಹಾಸಂ ಅಧ್ಯಕ್ಷ ಶಾಂತರಾಜ್ ಐತಾಳ್ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್ ಪಿ ಸಭೆಯಲ್ಲಿ ಇರುತ್ತಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ಪ್ರಕಟಣೆ ತಿಳಿಸಿರುತ್ತಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.