logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಟ್ರೆಂಡಿಂಗ್
share whatsappshare facebookshare telegram
1 Nov 2023
post image

ಉಡುಪಿ : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ 2023ರ ನವೆಂಬರ್ ತಿಂಗಳು ಪೂರ್ತಿ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ (ಸಂಪರ್ಕ ಸಂಖ್ಯೆ: 080-22107705), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ www.kannadapustakapradhikara.com ನಲ್ಲಿಯೂ ರಿಯಾಯಿತಿ ಲಭ್ಯವಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ , ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪ್ರಕಟಿಸುತ್ತಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.