logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಇ-ಸ್ಯಾಂಡ್ ಆಪ್ ನಲ್ಲಿ ಮರಳು ಲಭ್ಯ

ಟ್ರೆಂಡಿಂಗ್
share whatsappshare facebookshare telegram
26 Oct 2021
post image

ಉಡುಪಿ: ಇ-ಸ್ಯಾಂಡ್ ಆಪ್ ನಲ್ಲಿ ಮರಳು ಲಭ್ಯ ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ಮತ್ತು ಉಡುಪಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಸದರಿ ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ UDUPI E-SAND APP ನ ಮೂಲಕ ಪೂರೈಸಲು ತೀರ್ಮಾನಿಸಲಾಗಿರುತ್ತದೆ. ಅದರಂತೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ/ ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಂಡಿದ್ದು, ಮರಳು ಅವಶ್ಯಕತೆ ಇರುವವರು UDUPI E-SAND APP ಮುಖಾಂತರ ಪಡೆಯಬಹುದಾಗಿದ್ದು, ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿಯವರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2572333,: 6366745888, 6364024555 Sand App Contact No: 6366745888, 6364024555 (App related queries) 6366871888 (Accounts related queries) ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಭೂವಿಜ್ಞಾನಿ/ ಅನುಷ್ಠಾನಾಧಿಕಾರಿ, ಜಿಲ್ಲಾ 07 ಸದಸ್ಯರ ಸಮಿತಿ ಉಡುಪಿ ಜಿಲ್ಲೆ ಅವರ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.