logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ : ಸಂಜೀವಿನಿ ಸಮನ್ವಯ ಸಭೆ

ಟ್ರೆಂಡಿಂಗ್
share whatsappshare facebookshare telegram
4 Oct 2023
post image

ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ತಾಲೂಕು ಪಂಚಾಯತ್ ಬ್ರಹ್ಮಾವರ ಇವರ ಸಹಯೋಗದಲ್ಲಿ ಬ್ರಹ್ಮಾವರ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ, ತಾಲೂಕು ಮಟ್ಟದ ಒಕ್ಕೂಟ, ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಹಾಗೂ ಬ್ರಹ್ಮಾವರ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗಾಗಿ ಸಂಜೀವಿನಿ ಸಮನ್ವಯ ಸಭೆಯು ಬುಧವಾರ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಂಜೀವಿನಿ ಯೋಜನೆಯ ಹಿರಿಯ ರಾಜ್ಯ ಕಾರ್ಯಕ್ರಮ ವ್ಯವಸ್ಥಾಪಕ ಎಂ.ಕೆ ಅಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಜೀವಿನಿ ಯೋಜನೆಯು ದುರ್ಬಲ ವರ್ಗದ ಜನರ ಮತ್ತು ಮಹಿಳಾ ಸಬಲೀಕರಣದ ಅತ್ಯುನ್ನತ ಯೋಜನೆಯಾಗಿದ್ದು, ಇದನ್ನು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳು ಪರಸ್ಪರ ಸಮನ್ವಯತೆಯಿಂದ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು. ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಮ್ ಯೋಜನೆಯ ಯೋಜನಾ ನಿರ್ದೇಶಕ ಪ್ರಶಾಂತ್ ವಿ ರಾವ್ ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ್ದರು. ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಇಬ್ರಾಹಿಂ ಪುರ, ಜಿಲ್ಲಾ ಪಂಚಾಯತ್ ಸಹಾಯಕ ಅಧಿಕಾರಿ ಜೇಮ್ಸ್ ಡಿ ಸಿಲ್ವಾ, ತಾಲೂಕು ಒಕ್ಕೂಟದ ಕಾರ್ಯದರ್ಶಿ ಬೇಬಿ, ಎನ್.ಆರ್.ಎಲ್.ಎಂ ವ್ಯವಸ್ಥಾಪಕ ಅವಿನಾಶ್, ಸಂಜೀವಿನಿ ತಾಲೂಕು ಅಭಿಯಾನ ನಿರ್ವಹಣಾ ಘಟಕದ ಎಲ್ಲಾ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ವ್ಯವಸ್ಥಾಪಕಿ ನವ್ಯ ಸ್ವಾಗತಿಸಿ, ವಂದಿಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.