



ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಹಾಗೂ ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿದ್ಯಾರ್ಥಿವೇತನ ಪೋರ್ಟಲ್ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ವಿದ್ಯಾರ್ಥಿ ವೇತನ ಕಾರ್ಯಕ್ರಮದ ಕುರಿತು ಅರಿವು ಮೂಡಿಸುವ ಸಲುವಾಗಿ ನವೆಂಬರ್ 7 ರಿಂದ 30 ರ ವರೆಗೆ “ವಿದ್ಯಾರ್ಥಿವೇತನ ಅಭಿಯಾನ” ಕಾರ್ಯಕ್ರಮ ಹಮಿಕೊಳ್ಳಲಾಗಿದೆ.
ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://sw.kar.nic.in ನಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಲು ಆಯಾ ಶಾಲಾ-ಕಾಲೇಜುಗಳ ಮುಖ್ಯಸ್ಥರು ಸಹಕರಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.