



ಉಡುಪಿ: ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ಹೆರಿಗೆ ತಜ್ಞರು -01 (ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆ), ವೈದ್ಯಾಧಿಕಾರಿಗಳು-04 (ನಮ್ಮ ಕ್ಲಿನಿಕ್ ಟಿ.ಟಿ ರೋಡ್ ಕುಂದಾಪುರ, ನಮ್ಮ ಕ್ಲಿನಿಕ್ ಮರೀನಾಪುರ ಕಾರ್ಕಳ, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಹಾಗೂ ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆ), ಆಡಿಯೋಮೆಟ್ರಿಕ್ ಅಸಿಸ್ಟೆಂಟ್ -01 ಹುದ್ದೆ, ಯಂಗ್ ಹಿಯರಿಂಗ್ ಇಂಪೈರಿಡ್ ಚಿಲ್ಡçನ್ ಇನ್ಸ್ ಪೆಕ್ಟರ್ -01 ಹುದ್ದೆ (ಜಿಲ್ಲಾ ಆಸ್ಪತ್ರೆ) ಹಾಗೂ ಎಲ್.ಹೆಚ್.ವಿ -01 (ಉಡುಪಿಯ ನಗರ ಆರೋಗ್ಯ ಕೇಂದ್ರ) ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಗೆ ಸೆಪ್ಟಂಬರ್ 22 ರಂದು ಬೆಳಗ್ಗೆ 10.30 ಕ್ಕೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡಯಲಿದೆ. ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲಾತಿಗಳೊಂದಿಗೆ ಸಂದರ್ಶನದಲ್ಲಿ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘಧ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.