



ಉಡುಪಿ: ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ ಹಾಗೂ ಎ.ಪಿ.ಡಿ ಸಂಸ್ಥೆ ಬೆಂಗಳೂರು ಇವರ ಸಹಯೋಗದೊಂದಿಗೆ ಕೌಶಲ್ಯಾಧಾರಿತ ತರಬೇತಿ ಮತ್ತು ಉದ್ಯೋಗಕ್ಕೆ ಆಯ್ಕೆ ಶಿಬಿರದ ಉದ್ಘಾಟನೆ ಮತ್ತು ಸಂದರ್ಶನ ಕಾರ್ಯಕ್ರಮವು ಅಕ್ಟೋಬರ್ 4 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ನಡೆಯಲಿದೆ. ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ವಿಕಲಚೇತನರು ಅಂಗವಿಕಲರ ಗುರುತಿನ ಚೀಟಿ, ಶೈಕ್ಷಣಿಕ ದಾಖಲಾತಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಿ, ಸ್ಥಳೀಯ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಎ.ಪಿ.ಡಿ ಸಂಸ್ಥೆಯ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಹರೀಶ್ ಶೆಟ್ಟಿ ಮೊ.ನಂ: 8951537689 ಹಾಗೂ ಜಿಲ್ಲಾ ನೇಮಕಾತಿ ಅಧಿಕಾರಿ ಶ್ರೀಧರ ಮೊ.ನಂ: 9535225693 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.