



ಉಡುಪಿ: ಕರ್ನಾಟಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಸೆಲ್ಫ್ ಎಂಪ್ಲಾಯಿಡ್ ಟೈಲರಿಂಗ್, ಅಸಿಸ್ಟೆಂಟ್ ಬ್ಯೂಟಿ ಥೆರಪಿಸ್ಟ್, ಡೊಮೆಸ್ಟಿಕ್ಡಾ ಟಾ ಎಂಟ್ರಿ ಆಪರೇಟರ್ ಹಾಗೂ ಫ್ಯಾಷನ್ ಡಿಸೈನರ್ ಕೋರ್ಸುಗಳ ಕೌಶಲ್ಯಾಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿಗೆ ಆಫ್‌ಲೈನ್ಮೂ ಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.