



ಉಡುಪಿ, : ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜೂನ್ 10 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ, 9 ಗಂಟೆಗೆ ಕುಂಭಾಶಿಯಲ್ಲಿ ಜಿ.ಎಸ್.ಬಿ ಸೇವಾ ಟ್ರಸ್ಟ್ ನ ಭಜನಾ ಮಂದಿರ ಉದ್ಘಾಟನೆ, 10 ಕ್ಕೆ ಸಾಸ್ತಾನದಲ್ಲಿ ಬಾಳ್ಕುದ್ರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನೆ, ಮ.12 ಕ್ಕೆ ನಿಟ್ಟೆ ಪಂಚಾಯತ್ ಕಸ ವಿಲೇವಾರಿ ಘಟಕಕ್ಕೆ ಭೇಟಿ, 1.30 ಕ್ಕೆ ಕಾರ್ಕಳ ಶಬರಿ ಆಶ್ರಮದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ, 3 ಕ್ಕೆ ಕಾರ್ಕಳದ ಬಿ.ಜೆ.ಪಿ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿ ಮತ್ತು 3.30 ರಿಂದ 4 ರ ವರೆಗೆ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಕೋಟ ಕ್ಕೆ ತೆರಳಲಿರುವರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.