



ಉಡುಪಿ : ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರಾಜ್ಯದ ಕ್ರೀಡಾ ಪೋಷಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ, ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ, ಕಳೆದ ಮೂರು ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೋಷಕರಿಂದ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತಾವನೆಗಳನ್ನು ಸಲ್ಲಿಸಲು ನವೆಂಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.