



ಉಡುಪಿ, : ಪ್ರಸ್ತುತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯವು ಏಪ್ರಿಲ್ 19 ರಿಂದ ಪ್ರಾರಂಭವಾಗಿ ಸುಮಾರು 10 ದಿನಗಳವರೆಗೆ ಜಿಲ್ಲೆಯ ಕಡಿಯಾಳಿ ಯು. ಕಮಲಾ ಬಾಯಿ ಪ್ರೌಢಶಾಲೆ, ಆದಿ ಉಡುಪಿ ಪ್ರೌಢಶಾಲೆ, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ವಳಕಾಡು ಸರ್ಕಾರಿ ಪ್ರೌಡಶಾಲೆ, ಕ್ರಿಶ್ಚಿಯನ್ ಪ್ರೌಢಶಾಲೆ ಹಾಗೂ ಕುಂಜಿಬೆಟ್ಟು ಟಿ.ಎ.ಪೈ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಲಿರುವ ಹಿನ್ನೆಲೆ, ಮೌಲ್ಯಮಾಪನ ಮುಗಿದು ಪ್ರಶ್ನೋತ್ತರ ಪತ್ರಿಕೆಗಳನ್ನು ಬೆಂಗಳೂರು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ಸಾಗಿಸುವವರೆಗೆ, ಸಂಬAಧಿಸಿದ ಮೌಲ್ಯಮಾಪನ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು, ನಿಗಧಿಪಡಿಸಿದ ಮೌಲ್ಯಮಾಪನ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶಿಸಿರುತ್ತಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.