logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಅನೈತಿಕ ದಂಧೆ ನಡೆಸುತ್ತಿದ್ದ ಮಂಗಳಮುಖಿಯರ ವಿರುದ್ಧ ಎಸ್ಪಿ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ: ಇಬ್ಬರು ಪಿಂಪ್ ಗಳ ವಶ

ಟ್ರೆಂಡಿಂಗ್
share whatsappshare facebookshare telegram
16 Dec 2022
post image

ಉಡುಪಿ:

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಹಾಕೆ ಅವರು ಸ್ವತಃ ತಾವೇ ದಿಢೀರ್ ಕಾರ್ಯಾಚರಣೆ ನಡೆಸಿ ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಮಂಗಳ ಮುಖಿಯರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಇಬ್ಬರು‌ ಪಿಂಪ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪ ಮಂಗಳ ಮುಖಿಯರು ಅನೈತಿಕ ದಂಧೆ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿದ್ದವು. ಈ‌ ಹಿನ್ನೆಲೆಯಲ್ಲಿ ಡಿ.16ರಂದು ತಡರಾತ್ರಿ ಎಸ್ಪಿ ಕಾರ್ಯಾಚರಣೆ ನಡೆಸಿದ್ದರು. ನಗರದ ಸಿಟಿ ಬಸ್ ನಿಲ್ದಾಣ ಹಾಗೂ ಸರ್ವಿಸ್ ನಿಲ್ದಾಣದ ಸಮೀಪ ಮಂಗಳಮುಖಿಯರ ಅಟ್ಟಹಾಸ ಜೋರಾಗಿದ್ದು, ವಾಹನಗಳನ್ನು ಅಡ್ಡಹಾಕಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಾರೆ. ದಾರಿದೀಪವನ್ನು ಒಡೆದು ಹಾಕಿದ್ದಾರೆ ಮತ್ತು ಜನರಿಂದ ಹಣ ವಸೂಲಿ ಮಾಡುತ್ತಾರೆಂದು ದೂರುಗಳು ಬಂದಿದ್ದವು. ಸ್ವತಃ ಕಾರ್ಯಾಚರಣೆ ಇಳಿದ ಎಸ್ಪಿ, ಮಂಗಳಮುಖಿಯರನ್ನು ಅಲ್ಲಿಂದ ತೆರವು ಗೊಳಿಸಲು ಮುಂದಾದರು. ಈ‌ ಸಂದರ್ಭದಲ್ಲಿ ಎಸ್ಪಿ ಎಂಬುದನ್ನು ತಿಳಿಯದ ಕೆಲವು ಮಂಗಳ ಮುಖಿಯರು ಎಸ್ಪಿ ಜೊತೆ ವಾಗ್ವಾದಕ್ಕೆ ಇಳಿದು ಅವಾಚ್ಯ ಶಬ್ದಗಳಿಂದ ಬೈದರೆನ್ನ ಲಾಗಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎಲ್ಲರನ್ನು ಚದುರಿಸಿದರು. ಈ ವೇಳೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.