logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಜಿಲ್ಲಾ ಬಾಲಭವನದಲ್ಲಿ ಬೇಸಿಗೆ ಶಿಬಿರ

ಟ್ರೆಂಡಿಂಗ್
share whatsappshare facebookshare telegram
21 Apr 2022
post image

ಉಡುಪಿ,: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಪ್ರಸಕ್ತ ಸಾಲಿನ ಬೇಸಿಗೆ ಶಿಬಿರವನ್ನು ಏಪ್ರಿಲ್ 28 ರಿಂದ ಮೇ 7 ರ ವರೆಗೆ ಒಟ್ಟು 10 ದಿನಗಳ ಕಾಲ ಆಯೋಜಿಸಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ಶಿಬಿರ ನಡೆಯಲಿದ್ದು, ಶಿಬಿರದಲ್ಲಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲತೆ, ಸಮೂಹ ನೃತ್ಯ, ಸಂಗೀತ, ವರ್ಲೀ ಆರ್ಟ್, ಲಿಫ್ಟನ್ ಆರ್ಟ್ ಮುಂತಾದ ವಿಷಯಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಉಚಿತ ತರಬೇತಿ ನೀಡಲಾಗುವುದು. ಸರ್ಕಾರಿ ಶಾಲಾ ಮಕ್ಕಳು, ವಿಕಲಚೇತನ ಮಕ್ಕಳು ಹಾಗೂ ಹೆಚ್.ಐ.ವಿ ಸೋಂಕಿತ ಮಕ್ಕಳೂ ಶಿಬಿರದಲ್ಲಿ ಭಾಗವಹಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಯೋಜಕರು, ಜಿಲ್ಲಾ ಬಾಲಭವನ, ಉಡುಪಿ ದೂರವಾಣಿ ಸಂಖ್ಯೆ: 0820-2574978, 0820-2574972 ಅನ್ನು ಸಂಪರ್ಕಿಸುವAತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.