logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಟ್ರೆಂಡಿಂಗ್
share whatsappshare facebookshare telegram
16 Aug 2023
post image

ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ ರಾಜೀವನಗರ ಇದರ ಆಶ್ರಯದಲ್ಲಿ ಆ16 ರಂದು ಸರಕಾರಿ ಸಂಯುಕ್ತ ಪ್ರೌಢಶಾಲೆ ರಾಜೀವನಗರದಲ್ಲಿ ಆಯೋಜಿಸಲಾದ ಉಡುಪಿ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಧವಿ ಆಚಾರ್, ಉಪಾಧ್ಯಕ್ಷರು ನಿರುಪಮಾ ಹೆಗ್ಡೆ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಉಪೇಂದ್ರ ನಾಯಕ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ದೈಹಿಕ ಶಿಕ್ಷಣ ಪರೀವೀಕ್ಷಣಾಧಿಕಾರಿಗಳಾದ ಪ್ಲೋಸಿ ಫೆರ್ನಾಂಡಿಸ್, ಗೋಪಾಲ್ ಶೆಟ್ಟಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ರಿತೇಶ್ ಶೆಟ್ಟಿ, ಉಡುಪಿ ತಾಲೂಕು ದೈ.ಶಿ.ಶಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ್, ಉಪಾಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ ಹಾಗೂ ಸುಭಾಷ್ ಸಂಕಲ್ಕರ್ ಶ್ರೀಸುಭಾಷ್ ಚಂದ್ರ ಹೆಗ್ಡೆ, ಶ್ರೀ ಎಸ್.ಎಸ್. ಪ್ರಸಾದ್, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಬಾಲಕೃಷ್ಣ ಪಿ ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.