logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಮೃತ ಕೋವಿಡ್ ರೋಗಿಯ ಅಂತ್ಯ ಸಂಸ್ಕಾರ ನಡೆಸಿ ಮಾನವೀಯತೆ ಮೆರೆದ ಸಮಾಜ ಸೇವಕರು.!!

ಟ್ರೆಂಡಿಂಗ್
share whatsappshare facebookshare telegram
7 Feb 2022
post image

ಉಡುಪಿ: ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರ ನಡೆಸಲು ಸಂಬಂಧಿಕರು ಅಸಹಾಯಕರಾದ ಹಿನ್ನೆಲೆಯಲ್ಲಿ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ಹಾಗೂ ವಿನಯಚಂದ್ರ ಸಾಸ್ತಾನ ಅವರು ಸಂಬಂಧಿಕರ ಸಮಕ್ಷಮದಲ್ಲಿ ಬೀಡಿನಗುಡ್ಡೆ ಹಿಂದು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ. ಕೋಟೇಶ್ವರ ಸಾರ್ವಜನಿಕ ಸ್ಥಳದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ರೋಗಿಯನ್ನು ಸಮಾಜಸೇವಕ ವಿನಯಚಂದ್ರ ಸಾಸ್ತಾನ ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದರು. ರೋಗಿ ಕೋವಿಡ್ ಸೋಂಕಿಗೆ ತುತ್ತಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟರು. ಬಳಿಕ ಮೃತನ ಸಂಬಂಧಿಕರನ್ನು ಪತ್ತೆಗೊಳಿಸಲಾಯಿತು. ಆದರೆ, ಸಂಬಂಧಿಕರಿಗೆ ಅಂತ್ಯಸಂಸ್ಕಾರ ನಡೆಸಲು ಅಸಹಾಯಕತೆ ಎದುರಾದಗ ನಿತ್ಯಾನಂದ ಒಳಕಾಡು, ವಿನಯಚಂದ್ರ ಸಾಸ್ತಾನ ನೆರವಿಗೆ ಬಂದು, ಕೋವಿಡ್ ಸುರಕ್ಷಿತಾ ವಿಧಾನಗಳ ಮೂಲಕ ಅಂತ್ಯಸಂಸ್ಕಾರ ನಡೆಸಿದರು. ರೋಗಿಯ ಪಾರ್ಥಿವ ಶರೀರ ಸಾಗಿಸಲು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಉಚಿತವಾಗಿ ಆ್ಯಂಬುಲೆನ್ಸ್ ಸೇವೆ ಒದಗಿಸಿತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.