



ಉಡುಪಿ: ಹಿಂದೂ ಧರ್ಮೀಯರ ಅತ್ಯಂತ ಪ್ರಮುಖ ಶ್ರದ್ಧಾಕೇಂದ್ರವಾದ ತಿರುಪತಿಯ ಶ್ರೀವೇಂಕಟೇಶ್ವರ ದೇವರ ಪರಮ ಪಾವನವಾದ ನೈವೇದ್ಯ ಪ್ರಸಾದವನ್ನು ಕಲಬೆರಕೆಯ ತುಪ್ಪವನ್ನು ಮಿಶ್ರಣ ಮಾಡುವ ಮೂಲಕ ದೊಡ್ಡ ಅಪಚಾರವನ್ನು ಮಾಡಲಾಗಿದೆ. ಈ ಮೂಲಕ ಬಹು ದೊಡ್ಡ ಧಾರ್ಮಿಕ ಸಮಾಜವನ್ನು ಘಾಸಿಗೊಳಿಸಿದ್ದು ಅತ್ಯಂತ ಖಂಡನೀಯ ಮತ್ತು ಅಕ್ಷಮ್ಯ ಅಪರಾಧವಾಗಿದೆ.
ದೇವಸ್ಥಾನ ಮತ್ತು ಮಠ ಮಂದಿರಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಆಕ್ರಮಣಗಳನ್ನು ಶಾಶ್ವತವಾಗಿ ತಡೆಯಬೇಕಿದೆ. ಇದಕ್ಕಾಗಿ ರಾಜಕೀಯ ಪಕ್ಷಗಳ ಕಪಿಮುಷ್ಟಿಯಿಂದ ದೇವಸ್ಥಾನ ಮತ್ತು ಮಠ ಮಂದಿರಗಳನ್ನು ಮುಕ್ತಗೊಳಿಸಬೇಕು. ಸನಾತನ ಧರ್ಮದ ಸಂರಕ್ಷಣೆಗಾಗಿ ರಾಷ್ಟ್ರ ಮಟ್ಟದಲ್ಲಿ ಸಂತರ ಪೀಠಾಧಿಪತಿಗಳ ನೇತೃತ್ವದ ಮಾರ್ಗದರ್ಶಕ ಮಂಡಳಿಯನ್ನು ರಚಿಸಬೇಕು. ಯಾವುದೇ ಕಾರಣಕ್ಕೂ ರಾಜಕೀಯ ಹಸ್ತಕ್ಷೇಪ ಇರಬಾರದು ಎಂದು ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು.
ಶ್ರೀ ಭಂಡಾರಿಕೇರಿ ಮಠಾಧೀಶರಿಂದ ಖಂಡನೆ: ತಿರುಪತಿಯಲ್ಲಿ ಶ್ರೀನಿವಾಸನ ಸನ್ನಿಧಿಯಲ್ಲಿ ನಡೆದಿರುವ ಅಪಚಾರವನ್ನು ತೀರ್ವವಾಗಿ ಖಂಡಿಸಿ ಧರ್ಮ ಸಂಸತ್ ಅನ್ನು ರಚಿಸಿ ಆ ಮೂಲಕ ರಾಜಕೀಯ ಪಕ್ಷಗಳ ಹಸ್ತಕ್ಷೇಪದಿಂದ ಮುಕ್ತಗೊಳಿಸಬೇಕು ಎಂದು ಶ್ರೀಭಂಡಾರಕೇರಿ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿದ್ಯೇಶತೀರ್ಥಶ್ರೀಪಾದರು ತಿಳಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.