logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ನಾಪತ್ತೆಯಾಗಿದ್ದ ಬಾಲಕ ಕೇರಳದ ಪಾಲಕ್ಕಾಡ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ..!

ಟ್ರೆಂಡಿಂಗ್
share whatsappshare facebookshare telegram
9 Sept 2024
post image

ಉಡುಪಿ: ರವಿವಾರ ಉಡುಪಿಯಿಂದ ನಾಪತ್ತೆಯಾಗಿದ್ದ ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಮಗ ಆರ್ಯ(13) ಇಂದು ಬೆಳಗ್ಗೆ ಕೇರಳದ ಪಾಲಕ್ಕಾಡ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಉಡುಪಿ ಕಡಿಯಾಳಿಯಲ್ಲಿರುವ ಆಕಾಶ್ ಕೋಚಿಂಗ್ ಇನ್ಟಿಟ್ಯೂಟ್‌ಗೆ ತಂದೆಯೊಂದಿಗೆ ಬಂದಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಆರ್ಯ, ಮಧ್ಯಾಹ್ನ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದನು. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಮೂಲಕ ಕೇರಳದ ಕಡೆ ತೆರಳಿರುವುದು ಕಂಡುಬಂತು. ಅತ್ತ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಕಾರಣಕ್ಕಾಗಿ ಆರ್ಯನನ್ನು ಪಾಲಘಾಟ್ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಮಾಹಿತಿ ತಿಳಿದ ಉಡುಪಿ ಪೊಲೀಸರು ಪಾಲಘಾಟ್‌ಗೆ ತೆರಳಿದ್ದಾರೆಂದು ತಿಳಿದುಬಂದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.