



ಉಡುಪಿ: ಬೆಳ್ತಂಗಡಿಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿ ಆಕೆಗೆ ನ್ಯಾಯ ಒದಗಿಸಲು ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸೌಜನ್ಯ ಹೋರಾಟ ಸಮಿತಿ ಉಡುಪಿ ವತಿಯಿಂದ ಆ. 29 ರಂದು ಮಧ್ಯಾಹ್ನ 3 ಗಂಟೆಗೆ ಅಜ್ಜರಕಾಡಿನಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಪ್ರತಿಭಟನಾ ಸಭೆಯಲ್ಲಿ ಸೌಜನ್ಯ ಕುಟುಂಬ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಚಿಂತಕ ತಮ್ಮಣ್ಣ ಶೆಟ್ಟಿ ಭಾಗವಹಿಸಲಿದ್ದಾರೆ.
ಪ್ರತಿಭಟನೆಗೂ ಮುನ್ನ ಕೃಷ್ಣ ಮಠದಲ್ಲಿ ಪ್ರಾರ್ಥನೆ ಸಲ್ಲಿಸಿ ಪಾದಯಾತ್ರೆಯ ಮೂಲಕ ಅಜ್ಜರಕಾಡು ಹುತಾತ್ಮ ಸ್ಮಾರಕದವರೆಗೆ ಮೆರವಣಿಗೆ ನಡೆಯಲಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.