



ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಪ್ರಸಿದ್ಧ ಕಾದಂಬರಿಕಾರರಾದ ಯಂಡಮೂರಿ ವೀರೇಂದ್ರನಾಥ್ ಅವರನ್ನು ಉಡುಪಿ ಬನ್ನಂಜೆಯ ನಾರಾಯಣ ಗುರು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್ ಪಿ ಗೌರವಿಸಿದರು.
ಸಮಾರಂಭದಲ್ಲಿ ಡಾ. ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಪಿ. ವಿ ಭಂಡಾರಿ, ಹರ್ಷ ಇದರ ಆಡಳಿತ ನಿರ್ದೇಶಕರಾದ ಸೂರ್ಯಪ್ರಕಾಶ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ್ ಶೆಣೈ, ಮನೋರೋಗ ತಜ್ಞ ಡಾ. ವಿರೂಪಾಕ್ಷ ದೇವರಮನೆ, ಬಿಲ್ಲವರ ಸೇವಾ ಸಂಘ ಬನ್ನಂಜೆ ಇದರ ಅಧ್ಯಕ್ಷ ಮಾಧವ ಬನ್ನಂಜೆ, ತಾಲೂಕು ಕ ಸಾ ಪ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ,ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ಮೋಹನ್ ಉಡುಪ, ಕಸಾಪ ಬೈದೂರು ತಾಲೂಕು ಅಧ್ಯಕ್ಷ ಡಾ. ರಘು ನಾಯ್ಕ, ಕಸಾಪ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾದ೯ನ್, ಹಾಸ್ಯ ಭಾಷಣಕಾರರಾದ ಸಂಧ್ಯಾ ಶೆಣಿೈ, ಸಾಹಿತಿ ಗಿರಿಜಾ ಗಾ0ವ್ಕರ್ ,ಗೀತಾ ಕುಂದಾಪುರ, ಶಿಲ್ಪಾ ಜೋಶಿ ,ನರಸಿಂಹಮೂರ್ತಿ , ರಾಘವೇಂದ್ರ ಪ್ರಭು ಕರ್ವಾಲು ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.