



ಉಡುಪಿ:
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಸಾಹಿತ್ಯ ಸಮ್ಮೇಳನವು ನವಂಬರ್ 25 ಹಾಗೂ 26ರಂದು ಶ್ರೀ ಕ್ಷೇತ್ರ ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ನಡೆಯಲಿದೆ.
25.11.2022 ಶುಕ್ರವಾರ ಮಧ್ಯಾಹ್ನ ಗಂಟೆ 2:30 ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶಯದಲ್ಲಿ ಚಿಗುರು ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಉದ್ಘಾಟನೆ. ಗಂಟೆ 2.45ಕ್ಕೆ. ಮಕ್ಕಳ ಕವಿ ಗೋಷ್ಠಿ, ನೃತ್ಯ ಜನಪದ ಹಾಗೂ ಶಾಸ್ತ್ರೀಯ ಸಂಗೀತ, ಏಕಪಾತ್ರ ಅಭಿನಯ, ನಾಟಕ ನಡೆಯಲಿದೆ.
ನವಂಬರ್ 26 ಶನಿವಾರ ದಂದು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗರ ನೇತೃತ್ವದಲ್ಲಿ ಬೆಳಗ್ಗೆ 8:30 ರಿಂದ ಧ್ವಜಾರೋಹಣ, ಸಮ್ಮೇಳನ ಅಧ್ಯಕ್ಷರಾದ ಪ್ರೊಫೆಸರ್ ಎನ್ .ಟಿ ಭಟ್ ಅವರನ್ನು ಮೆರವಣಿಗೆ ಮೂಲಕ ಸ್ವಾಗತ, ವಸ್ತು ಪ್ರದರ್ಶನ, ಛಾಯಾಚಿತ್ರ ಪ್ರದರ್ಶನ, ಪುಸ್ತಕ ಮಳಿಗೆಗಳ ಉದ್ಘಾಟನೆ ನಂತರ ಸಭಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದೆ.
ಬಳಿಕ ವಿಚಾರ ಗೋಷ್ಠಿಗಳು, ಸಾಂಸ್ಕೃತಿಕ ವೈವಿಧ್ಯ, ಸಮ್ಮೇಳನ ಅಧ್ಯಕ್ಷರೊಂದಿಗೆ ಸಂವಾದ, ಸಾಧಕರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಗೌರವ ಅಭಿನಂದನೆ ನಡೆಯಲಿದ್ದು ಸಂಜೆ 4:30 ರಿಂದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ ಹೆಚ್. ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.