logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ: ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ: ವಿಶ್ವಕರ್ಮ ಸಮುದಾಯವನ್ನು ಅಭಿವೃದ್ಧಿಗೊಳಿಸಲು 14 ಸಾವಿರ ಕೋಟಿ ಅನುದಾನ: - ಶಾಸಕ ಯಶ್ ಪಾಲ್. ಎ ಸುವರ್ಣ

ಟ್ರೆಂಡಿಂಗ್
share whatsappshare facebookshare telegram
1 Jan 2024
post image

ಉಡುಪಿ, ಜ.01: ಅಮರಶಿಲ್ಪಿ ಜಕಣಾಚಾರಿ ಅವರು ತಮ್ಮ ಕೈಚಳಕದ ಮೂಲಕ ಕೆತ್ತನೆ ಮಾಡಿದ ಶಿಲ್ಪ ಕಲಾಕೃತಿಗಳು ಇಂದು ಇಡೀ ವಿಶ್ವದ ಪ್ರವಾಸಿಗರ ಗಮನ ಸೆಳೆಯುತ್ತಿದ್ದು, ದೇಶದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ ಎಂದು ಶಾಸಕ ಯಶ್ ಪಾಲ್. ಎ ಸುವರ್ಣ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.

ಕೆಂದ್ರ ಸರ್ಕಾರವು ವಿಶ್ವಕರ್ಮ ಸಮುದಾಯವನ್ನು ಅಭಿವೃದ್ಧಿಗೊಳಿಸುವ ಉದ್ದೇಶದಿಂದ 14 ಸಾವಿರ ಕೋಟಿ ಅನುದಾನವನ್ನು ಮೀಸಲಿಟ್ಟು, ಸಮುದಾಯಕ್ಕೆ ಉತ್ತೇಜನ ನೀಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳ ಮಾಹಿತಿಯ ಕುರಿತು ಅರಿವು ಮೂಡಿಸುವುದರೊಂದಿಗೆ ಸಮುದಾಯದ ಮುಖಂಡರು ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಗ್ರಾಮ ಪಂಚಾಯತ್ ಗಳ ಮೂಲಕವೂ ಸಾರ್ವಜನಿಕರಿಗೆ ಯೋಜನೆಯ ಕುರಿತು ಅರಿವು ಮೂಡಿಸುವ ಕೆಲಸವಾಗುತ್ತಿದೆ ಎಂದರು. ಶಿಲ್ಪಕಲಾಕೃತಿಗಳ ಕೆತ್ತನೆ ಕುರಿತು ಪ್ರವಾಸಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಈ ವೃತ್ತಿಯನ್ನು ಮುಂದಿನ ಪೀಳಿಗೆಯವರು ಮುಂದುವರೆಸಿಕೊ೦ಡು ಹೋಗಲು ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ವಿಶ್ವದಲ್ಲಿ ಭಾರತವನ್ನು ಶಿಲ್ಪಕಲೆಗಳ ತವರೂರು ಎಂದು ಗುರುತಿಸಲು ಶಿಲ್ಪಿಗಳೇ ಕಾರಣೀಕರ್ತರು. ಶಿಲ್ಪಕಲೆಯ ಮೂರ್ತಿಯಲ್ಲಿ ಶಿಲ್ಪಿಯ ಹೆಸರನ್ನು ನಮೂದಿಸುವುದರಿಂದ ಮುಂದಿನ ಜನಾಂಗದವರು ಸುಲಭವಾಗಿ ಗುರುತಿಸಲು ಸಾಧ್ಯ. ಈ ಕುರಿತು ಸರಕಾರದ ಗಮನಕ್ಕೆ ತರಲಾಗುವುದು ಎಂದರು. ವಿಶ್ವಕರ್ಮ ಎಜ್ಯುಕೇಶನಲ್ ಟ್ರಸ್ಟ್ (ರಿ) ಅಧ್ಯಕ್ಷ ಪ್ರೊ.ಬಿ.ಎ ಆಚಾರ್ಯ ಅವರು ಜಕಣಾಚಾರಿ ಅವರ ಜೀವನ ಹಾಗೂ ಸಾಧನೆ ಕುರಿತು ಉಪನ್ಯಾಸ ನೀಡಿ, ದೇಶದ ಸೌಂದರ್ಯ ಮತ್ತು ಸಂಪತ್ತಿಗೆ ಶಿಲ್ಪಕಲೆಯೇ ಕಾರಣೀಭೂತವಾಗಿದೆ. ವಿಶ್ವಕರ್ಮರು ಕರ್ನಾಟಕದ ಬೇಲೂರು, ಹಳೆಬೀಡು, ಹಂಪಿ, ಪಟ್ಟದಕಲ್ಲು, ಶ್ರವಣಬೆಳಗೊಳದಲ್ಲಿ ನಿರ್ಮಿಸಿದ ಬೃಹತ್ ಶಿಲ್ಪಗಳು ಜಗತ್ತಿನ ಎಲ್ಲಾ ಭಾಗಗಳ ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ ಎಂದರು.

ಸಮುದಾಯಗಳ ಸಹಭಾಗಿತ್ವದಿಂದ ದಿನಾಚರಣೆಗಳು ಅರ್ಥಪೂರ್ಣವಾಗುತ್ತವೆ. ಸರಕಾರದ ಸೌಲಭ್ಯಗಳನ್ನು ಸಮುದಾಯದ ಫಲಾನುಭವಿಗಳು ಪಡೆದು ಪ್ರಗತಿಯನ್ನು ಸಾಧಿಸಬೇಕು. ಶಿಲ್ಪಿಗಳ ಪ್ರತಿನಿಧಿ ಜಕಣಾಚಾರ್ಯರು. 12ನೇ ಶತಮಾನದಲ್ಲಿ ಜಕಣಾಚಾರಿ ಮಾಡಿದ ಸಾಧನೆ ಜನರ ಮನದಲ್ಲಿ ಚಿರಸ್ಥಾಯಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಶಿಲಾಶಿಲ್ಪಿ ರಾಮಚಂದ್ರ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಉಪ ಕಾರ್ಯದರ್ಶಿ ರಾಜು ಮೊಗವೀರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ವಿಶ್ವಕರ್ಮ ಒಕ್ಕೂಟದ ಉಡುಪಿ ಹಾಗೂ ದ.ಕನ್ನಡ ಜಿಲ್ಲಾಧ್ಯಕ್ಷ ಮಧು ಆಚಾರ್ಯ ಮುಲ್ಕಿ, ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ, ಕುಂಜಿಬೆಟ್ಟು ಇದರ ಅಧ್ಯಕ್ಷ ಕೆ. ವೆಂಕಟೇಶ್ ಆಚಾರ್ಯ, ಅಖಿಲ ಭಾರತ ವಿಶ್ವಕರ್ಮ ಮಹಾಸಭಾ ಜಿಲ್ಲಾಧ್ಯಕ್ಷ ರಮೇಶ್ ಆಚಾರ್ಯ ನೇರಂಬಳ್ಳಿ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕಿ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರೆ, ಮಹೇಶ್ ಮಲ್ಪೆ ನಿರೂಪಿಸಿದರೆ, ಹರೀಶ್ ವಂದಿಸಿದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.