logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ :ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಟ್ರೆಂಡಿಂಗ್
share whatsappshare facebookshare telegram
27 Sept 2023
post image

ಉಡುಪಿ : ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ನಗರಸಭೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವು ಸೆಪ್ಟಂಬರ್ 27 ರಂದು ಬೆಳಗ್ಗೆ 9.45 ಕ್ಕೆ ನಗರದ ಅಜ್ಜರಕಾಡು ಪುರಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಉದ್ಘಾಟಿಸಿದ್ದಾರೆ. ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಿದ್ದರು.

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್.ಭೋಜೆಗೌಡ, ಡಾ.ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಡಾ. ರಾಮ್ ಪ್ರಸಾತ್ ಮನೋಹರ್ ವಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಹಾಗೂ ಮತ್ತಿತರರು ಭಾಗವಹಿಸಿದ್ದರು. ಮಣಿಪಾಲ ಡಬ್ಲೂö್ಯ.ಜಿ.ಎಸ್.ಹೆಚ್.ಎ ಗ್ರೂಪ್‌ನ ಪ್ರಾಂಶುಪಾಲ ಡಾ. ಶೆಫ್ ಕೆ ತಿರು ಸಂದೇಶ ನೀಡಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.