logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ: ಜಿಲ್ಲೆಯಲ್ಲಿ ದಸರಾ ಆಚರಣೆಗೆ ಜಿಲ್ಲಾಧಿಕಾರಿ ಕೂರ್ಮ ರಾವ್‌ ಎಂ ಮಾರ್ಗಸೂಚಿ ಬಿಡುಗಡೆ

ಟ್ರೆಂಡಿಂಗ್
share whatsappshare facebookshare telegram
6 Oct 2021
post image

ದಿನಾಂಕ: 07-10-2021 ರಿಂದ ದಿನಾಂಕ: 15.10.2021 ರವರೆಗೆ ನಡೆಯುವ ದಸರಾ ಆಚರಣೆಯ ಕಾರ್ಯಕ್ರಮಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ದಸರಾ ಆಚರಣೆಯಲ್ಲಿ ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಎಲ್ಲಾ ಕಾರ್ಯಕ್ರಮಗಳನ್ನುನಿಷೇಧಿಸಲಾಗಿದೆ. ದೇವಾಲಯದಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ ಅರ್ಚಕರು/ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ವರ್ಗದವರು ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ಕಾರ್ಯಕ್ರಮದ ಆಯೋಜಕರು /ದೇವಸ್ಥಾನದ ಆಡಳಿತಾಧಿಕಾರಿಯವರು ಕಾರ್ಯಕ್ರಮ ನಡೆಯುವಲ್ಲಿ ಸ್ಯಾನಿಟೈಸರ್, ಮಾಸ್ಕ್ ಬಳಕೆ , ಸಾಮಾಜಿಕ ಅಂತರ ಪಾಲನೆಗೆ ಕ್ರಮಕೈಗೊಳ್ಳತಕ್ಕದ್ದು .ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆರೋಗ್ಯಇಲಾಖೆ,ಪೊಲೀಸ್ ಇಲಾಖೆ,ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯಸಂಸ್ಥೆ/ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ/ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ಆದುದರಿಂದ ಸರಕಾರದ ಆದೇಶದಂತೆ ದಸರಾ ಆಚರಣೆಯನ್ನು ಕೋವಿಡ್ ಪಾಸಿಟಿವಿಟಿ ದರದ ಏರಿಕೆಗೆ ಕಾರಣವಾಗದಂತೆ ಅತ್ಯಂತ ಸರಳವಾಗಿ ಮತ್ತು ಭಕ್ತಿಪೂರ್ವಕವಾಗಿ ಕೋವಿಡ್-19 ಸಮುಚಿತ ವರ್ತನೆಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಿಕೊಂಡು ಆಚರಿಸುವಂತೆ ಸಂಬಂಧಪಟ್ಟ ಎಲ್ಲಾ ಆಯೋಜಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಕೋರಿದ್ದಾರೆ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.