


ಉಡುಪಿ: ಉಡುಪಿಯಿಂದ ಕುದುರೆಮುಖ ದಾರಿಯಾಗಿ ಕಳಸದ ಕಡೆಗೆ ಹೋಗುತ್ತಿದ್ದ ಟೂರಿಸ್ಟ್ ವಾಹನವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ವಾಹನ ಸುಟ್ಟು ಕರಕಲಾದ ಘಟನೆ ಕುದುರೆಮುಖದಲ್ಲಿ ಶನಿವಾರ ಸಂಭವಿಸಿದೆ.
ಉಡುಪಿಯ ಟೂರಿಸ್ಟ್ ವಾಹನದಲ್ಲಿ ಕಾರ್ಕಳ ಮಾಳ ಮಾರ್ಗವಾಗಿ ಹನ್ನೊಂದು ಮಂದಿ ಪ್ರಯಾಣಿಸುತ್ತಿದ್ದರು. ಕುದುರೆಮುಖ ಸಮೀಪಿಸುತ್ತಿದ್ದಂತೆ ಟೂರಿಸ್ಟ್ ವಾಹನದಲ್ಲಿ ಏಕಾಏಕಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ಬೆಂಕಿ ವಾಹನ ತುಂಬಾ ವ್ಯಾಪಿಸಿದೆ. ಅದೃಷ್ಟವಶಾತ್ ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ಹೊರಗೆ ಓಡಿಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಉಳಿದಂತೆ ಯಾರಿಗೂ ಜೀವಹಾನಿ ಸಂಭವಿಸಿಲ್ಲ.ಆದರೆ ವಾಹನ ಸಂಪೂರ್ಣವಾಗಿ ಭಸ್ಮಗೊಂಡಿದ್ದು.ಬೆಂಕಿ ನಂದಿಸಲು ಅಗ್ನಿಶಾಮಕ ದಳದವರು ಸಹಕರಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.