logo
WhatsApp Image 2026-04-02 at 14.46.04.jpeg
hindalco everlast.jpeg

ಉಜಿರೆ: ಅ. 1 ರಂದು ಎಸ್.ಡಿ.ಎಂ ಕಾಲೇಜಿನಲ್ಲಿ ದೇವದಾಸಿ ಕುರಿತ ಸಾಕ್ಷ್ಯ ಚಿತ್ರ ‘ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್’ ಪ್ರದರ್ಶನ

ಟ್ರೆಂಡಿಂಗ್
share whatsappshare facebookshare telegram
26 Sept 2023
post image

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆ ಪತ್ರಿಕೋದ್ಯಮ ವಿಭಾಗ ಹಾಗೂ ಪೂರ್ವಿ ಪ್ರೊಡಕ್ಷನ್ಸ್, ಉಪ್ಪಿನಂಗಡಿ ಇವರ ಜಂಟಿ ಸಹಯೋಗದಲ್ಲಿ ಶ್ರೀಮತಿ ಪೂರ್ಣಿಮಾ ರವಿ ನಿರ್ದೇಶಿಸಿರುವ ದೇವದಾಸಿಯರ ಕುರಿತು ಸಾಕ್ಷ್ಯ ಚಿತ್ರ ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್ ಅ. 1 ರಂದು 9.30 ರಿಂದ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ನಡೆಯಲಿದ್ದು ಉದ್ಘಾಟನೆಯನ್ನು ಪ್ರೊ. ವರದೇಶ್ ಹಿರೇಗಂಗೆ ನಿರ್ದೇಶಕರು, ಗಾಂಧಿಯನ್ ಇನ್ಸ್ಟಿಟ್ಯೂಟ್ ಫಾರ್ ಫಿಲಾಸಫಿಕಲ್ ಆರ್ಟ್ಸ್ & ಸೈನ್ಸಸ್, ಮಾಹೆ ಇವರು ನಡೆಸಿಕೊಡಲಿದ್ದಾರೆ.

ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ಬಿ.ಎ. ಕುಮಾರ್ ಹೆಗ್ಡೆ ವಹಿಸಲಿದ್ದಾರೆ.

ಅತಿಥಿಗಳಾಗಿ ಡಾ. ತಾರೀಹಳ್ಳಿ ಹನುಮಂತಪ್ಪ ಮುಖ್ಯಸ್ಥರು, ಮಾನವ ಶಾಸ್ತ್ರ ವಿಭಾಗ, ಕನ್ನಡ ವಿಶ್ವವಿದ್ಯಾನಿಲಯ, ಹಂಪಿ ಡಾ. ಎಚ್.ಎಂ. ಚಂದ್ರಶೇಖರ ಶಾಸ್ತ್ರಿ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕರು, ವಿಜಯನಗರ ಮಹಾವಿದ್ಯಾಲಯ, ಹೊಸಪೇಟೆ ಟಿ.ವಿ. ರೇಣುಕಮ್ಮ ಅಧ್ಯಕ್ಷರು, ಕರ್ನಾಟಕ ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘ ಭಾಗವಹಿಸಲಿದ್ದಾರೆ.

ಶ್ರೀಮತಿ ಪೂರ್ಣಿಮಾ ರವಿ ಪೂರ್ವಿ ಪ್ರೊಡಕ್ಷನ್ಸ್, ಡಾ. ಭಾಸ್ಕರ ಹೆಗ್ಡೆ ಮುಖ್ಯಸ್ಥರು, ಪತ್ರಿಕೋದ್ಯಮ ವಿಭಾಗ, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿರಲಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.