



ಮಂಗಳೂರು: ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಮೃತ ಬೈಕ್ ಸವಾರನನ್ನು ಬಾಗಲಕೋಟೆ ಜಿಲ್ಲೆಯ ಸುರೇಶ್ (30) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಿಂದ ಕಲ್ಲಾಪು ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ತಕ್ಷಣವೇ ಸಾರ್ವಜನಿಕರು ಮೃತದೇಹವನ್ನು ಆಂಬುಲೆನ್ಸ್ ಮೂಲಕ ನಗರದ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದು ಬಂದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.