



ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಸದಸ್ಯರಿಗೆ ಪ್ರತಿ ಮಾಹೆಯಲ್ಲಿ 10 ಕೆ.ಜಿ ಅಕ್ಕಿ ದೊರಕಬೇಕೆಂಬ ಉದ್ದೇಶದಿಂದ ಜುಲೈ 2023 ರ ಮಾಹೆಯಿಂದ ನೀಡಲಾಗುತ್ತಿದ್ದ ನಗದು ವರ್ಗಾವಣೆಯ ಬದಲಾಗಿ ಪ್ರತಿ ಮಾಹೆಯಲ್ಲಿ ಎನ್.ಎಫ್.ಎಸ್.ಎ ಯೋಜನೆಯ ಅಕ್ಕಿ ಹಂಚಿಕೆಯೊಂದಿಗೆ ಹೆಚ್ಚುವರಿಯಾಗಿ ೫ ಕೆ.ಜಿ ಅಕ್ಕಿಯನ್ನು ಫೆಬ್ರವರಿ ತಿಂಗಳಿಂದ ಅನ್ವಯವಾಗುವಂತೆ ಮಾರ್ಚ್ ತಿಂಗಳಿಂದ ನೀಡಲಾಗುತ್ತದೆ.
ಅದರಂತೆ ಮಾರ್ಚ್ ತಿಂಗಳಲ್ಲಿ ಆದ್ಯತಾ ಪಡಿತರ ಚೀಟಿ ಹೊಂದಿರುವ ಪ್ರತಿ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ಎನ್.ಎಫ್.ಎಸ್ ಯೋಜನೆಯ 5 ಕೆ.ಜಿ, ಫೆಬ್ರವರಿ ತಿಂಗಳ ಅನ್ನಭಾಗ್ಯ ಯೋಜನೆಯ ಬಾಬ್ತು 5 ಕೆ.ಜಿ ಅಕ್ಕಿ, ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆಯ 5 ಕೆ.ಜಿ. ಅಕ್ಕಿ ಸೇರಿ ಒಟ್ಟು ಈ ತಿಂಗಳಲ್ಲಿ 15 ಕೆ.ಜಿ ಅಕ್ಕಿಯನ್ನು ಆದ್ಯತಾ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ವಿತರಿಸಲಾಗುತ್ತದೆ.
ಅಂತ್ಯೋದಯ ಪಡಿತರ ಚೀಟಿಗಳಿಗೆ ಎನ್.ಎಫ್.ಎಸ್.ಎ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ ೩೫ ಕೆ.ಜಿ ಅಕ್ಕಿ ಹಂಚಿಕೆ ಇರುವುದರಿಂದ 2025 ರ ಮಾರ್ಚ್ ತಿಂಗಳಿನಿಂದ ಏಕಸದಸ್ಯ, ದ್ವಿಸದಸ್ಯ, ತ್ರಿಸದಸ್ಯರನ್ನು ಹೊಂದಿರುವ ಅಂತ್ಯೋದಯ ಪಡಿತರ ಚೀಟಿಗಳನ್ನು ಹೊರತುಪಡಿಸಿ 4 ಮತ್ತು 4 ಕ್ಕಿಂತ ಹೆಚ್ಚಿನ ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳಿಗೆ ಪ್ರತಿ ತಿಂಗಳಲ್ಲಿ ಹೆಚ್ಚುವರಿ ಸದಸ್ಯರಿಗೆ ೫ ಕೆ.ಜಿ. ಅಕ್ಕಿಯನ್ನು ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.