



ಬೆಂಗಳೂರು: ಈ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ಪಿಯು ವಿದ್ಯಾರ್ಥಿಗಳಿಗೆ ಇನ್ಮುಂದೆ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ.
ಮೇ 20 ರಿಂದ ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭವಾಗಲಿದ್ದು, ಜೂನ್ 1 ರಿಂದ ದ್ವಿತೀಯ ಪಿಯುಸಿ ಪ್ರಕ್ರಿಯೆ ಆರಂಭಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಯ ಮಕ್ಕಳಿಗೆ ಪಠ್ಯಕ್ರಮ ಬೋಧನಾ ಪ್ರಕ್ರಿಯೆ ಜೂನ್ 9 ರಿಂದ ಆರಂಭವಾಗಲಿದೆ.
ಜೂನ್ 15 ರವರೆಗೆ ಪ್ರಥಮ ಪಿಯುಗೆ ದಂಡ ಶುಲ್ಕವಿಲ್ಲದೆ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ. ಇನ್ನೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜೂನ್ 1 ರಿಂದ 15ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ದಂಡ ಶುಲ್ಕದೊಂದಿಗೆ ಜೂನ್ 30 ರವರೆಗೆ ಅವಕಾಶ ನೀಡಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.