logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕೇಂದ್ರ ಸಚಿವರ ಕ್ಷೇತ್ರದಲ್ಲಿ ಇದೆಂತಹ ದುರ್ಗತಿ... ರಸ್ತೆ ಇಲ್ಲದ ಹೊಳೆಕೂಡಿಗೆ ಗ್ರಾಮಕ್ಕೆ ತೆಪ್ಪದಲ್ಲೆ ಶವ ಸಾಗಾಟ

ಟ್ರೆಂಡಿಂಗ್
share whatsappshare facebookshare telegram
23 Jan 2022
post image

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

ಚಿಕ್ಕಮಗಳೂರು: ರಸ್ತೆ ಸೌಕರ್ಯವಿಲ್ಲದೆ ಮಲೆಕುಡಿಯ ಕುಟುಂಬವೊಂದು ತಮ್ಮ ಕುಟುಂಬದ ಸದಸ್ಯರೊಬ್ಬರ ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿದ ಘಟನೆ ಕೊಟ್ಟಿಗೆಹಾರ ಸಮೀಪದ

ಹೊಳೆಕೂಡಿಗೆ ಗ್ರಾಮದಲ್ಲಿ ನಡೆದಿದೆ.

ಶುಕ್ರವಾರ ರಾತ್ರಿ ಹೊಳೆಕೂಡಿಗೆ ಮೂಲದ ಸುಬ್ಬರಾಯ(70) ಎಂಬುವವರು ಮೂತ್ರಪಿಂಡದ ಸಮಸ್ಯೆಯಿಂದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅಂತ್ಯಸಂಸ್ಕಾರವನ್ನು ನೆರವೇರಿಸಲು ಶನಿವಾರ  ಹೊಳೆಕೂಡಿಗೆಗೆ ಮೃತದೇಹವನ್ನು ತರಲಾಯಿತು. ಆದರೆ ಮೃತರ ಮನೆಗೆ ಹೋಗಲು ರಸ್ತೆ ಸೌಕರ್ಯ ಇಲ್ಲದೇ ಇರುವುದರಿಂದ ತೆಪ್ಪದಲ್ಲಿಯೇ ಮೃತದೇಹವನ್ನು ಇಟ್ಟು ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ನಾಲ್ಕು ದಶಕಗಳಿಂದ ಸಂಪರ್ಕಕ್ಕೆ ತೆಪ್ಪವನ್ನೇ ಆಶ್ರಯಿಸಿರುವ  ಈ ಕುಟುಂಬ ಬೇರೆ ಬೇರೆ ಸಂದರ್ಭಗಳಲ್ಲಿ 9 ಮೃತದೇಹವನ್ನು ತೆಪ್ಪದಲ್ಲಿ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದೆ. ನದಿಯ ಒಂದು ತೀರದ ಜಾಗವನ್ನು ತೆರವುಗೊಳಿಸಿ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಅಥವಾ ತೂಗು ಸೇತುವೆ ನಿರ್ಮಿಸುವಂತೆ ಈ ಕುಟುಂಬ ಹಲವು ಬಾರಿ ಜಿಲ್ಲಾಧಿಕಾರಿಗಳು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.  

ಈ ಬಗ್ಗೆ ಮಾತನಾಡಿದ ಮಲೆಕುಡಿಯ ಕುಟುಂಬದ ಸದಸ್ಯರಾದ ಸುರೇಶ್, ರಸ್ತೆಗಾಗಿ, ತೂಗು ಸೇತುವೆಗಾಗಿ ಹಲವು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳು, ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಇಲ್ಲಿನ ಪರಿಸ್ಥಿತಿ ಬದಲಾಗಿಲ್ಲ. ಗ್ರಾಮಸ್ಥರು ಅನಾರೋಗ್ಯಪೀಡಿತರಾದರೆ, ಸಾವನ್ನಪ್ಪಿದರೆ ತೆಪ್ಪವನ್ನೇ ಆಶ್ರಯಿಸಬೇಕಾಗಿದೆ. ಜನಪ್ರತಿನಿಧಿಗಳು ಈ ಕುರಿತು ಯೋಚಿಸಬೇಕಾಗಿದೆ. ಸಿ.ಟಿ. ರವಿ ಅವರು ಇಲ್ಲಿ ದೀರ್ಘಕಾಲ ಉಸ್ತುವಾರಿ ಸಚಿವರಾಗಿದ್ದವರು. ಹಾಗೆ ಶೋಭಾ ಕರಂದ್ಲಾಜೆ ಅವರು ಇಲ್ಲಿನ ಸಂಸದರಾಗಿ ಇದೀಗ ಕೇಂದ್ರ ಸಚಿವೆಯಾದವರು. ಅಧಿಕಾರಸ್ಥರು ಈ ಕುರಿತು ಮಗದೊಮ್ಮೆ ಯೋಚಿಸಬೇಕಾಗಿದೆ ಎಂದು ಚಿಕ್ಕಮಗಳೂರಿನ ಪ್ರಜ್ಞಾವಂತರು ಅಭಿಪ್ರಾಯಪಡುತ್ತಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.