



ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ , ಅಮಿತ್ ಶಾ ಬಳಿಕ ಬೆಳಗಾವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡುತ್ತಿದ್ದು, ಖಾನಾಪುರ ಹಾಗೂ ಕಿತ್ತೂರು ಕ್ಷೇತ್ರಗಳಲ್ಲಿ ಮತಬೇಟೆ ನಡೆಸಲಿದ್ದಾರೆ.
ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದಲ್ಲಿ ವಿಜಯಸಂಕಲ್ಪ ರಥಯಾತ್ರೆ ಹಾಗೂ ಕಿತ್ತೂರು ಕ್ಷೇತ್ರದಲ್ಲಿ ಬೃಹತ್ ರೋಡ್ ಶೋದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ 11.40ಕ್ಕೆ ಬೆಳಗಾವಿ (Belagavi) ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಳಿಯಲಿರುವ ರಾಜನಾಥ್ ಸಿಂಗ್ ಬಳಿಕ ಹೆಲಿಕಾಪ್ಟರ್ ಮೂಲಕ ನಂದಗಡಕ್ಕೆ ಹೋಗಲಿದ್ದಾರೆ. ನಂದಗಡದಲ್ಲಿ ಸಂಗೊಳ್ಳಿ ರಾಯಣ್ಣ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿರುವ ರಾಜನಾಥ ಸಿಂಗ್ 12.30ಕ್ಕೆ ನಂದಗಡದಲ್ಲಿ ವಿಜಯಸಂಕಲ್ಪ ರಥಯಾತ್ರೆಗೆ ಚಾಲನೆ ಕೊಡಲಿದ್ದಾರೆ.
ಬಳಿಕ ಬೃಹತ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿರುವ ರಾಜನಾಥ್ ಸಿಂಗ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಕಿತ್ತೂರು ಸೈನಿಕ ಶಾಲೆಗೆ ತೆರಳಲಿದ್ದಾರೆ. ಕಿತ್ತೂರಲ್ಲೇ ಮಧ್ಯಾಹ್ನದ ಭೋಜನ ಮುಗಿಸಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಕಿತ್ತೂರು ಪಟ್ಟಣದ ಚೆನ್ನಮ್ಮ ವೃತ್ತದಿಂದ ಕೋಟೆಯವರೆಗೆ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ರಾಜನಾಥ ಸಿಂಗ್‌ಗೆ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ ಸೇರಿ ಸ್ಥಳೀಯ ಶಾಸಕರು ಸಾಥ್ ನೀಡಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.