



ನವದೆಹಲಿ: ಗ್ರಾಹಕರಿಗೆ ಶಾಕ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗಿದ್ದು ಅಗತ್ಯ ವಸ್ತುಗಳ ಮೇಲೆ ಜಿಎಸ್ಟಿ ದರ ವಿಧಿಸಲಾಗುತ್ತಿದೆ. ಈ ಬೆನ್ನಲ್ಲೇ ನಂದಿನಿ ಉತ್ಪನ್ನಗಳ ದರವನ್ನು ಕೂಡ ಕೆಎಂಎಫ್ ನಿಂದ ಪರಿಷ್ಕರಣೆ ಮಾಡಲಾಗಿದೆ . ಇಂದಿನಿಂದ ಜುಲೈ 18 ರಿಂದ ಹಾಲಿನ ದರದಲ್ಲಿ ಭಾರಿ ಏರಿಕೆ ಕಾಣಲಿದೆ . ಮೊಸರು, ಮಜ್ಜಿಗೆ ಮತ್ತು ಸಿಹಿ ಲಸ್ಸಿ ಉತ್ಪನ್ನಗಳ ಮೇಲೆ ಜಿಎಸ್ಟಿ ವಿಧಿಸಿರುವ ಹಿನ್ನಲೆಯಲ್ಲಿ, ನಂದಿನಿ ಮೊಸಲು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮೇಲೆ ದರಗಳನ್ನು ಪರಿಷ್ಕರಿಸಲಾಗುತ್ತಿದೆ ಎಂದು ತಿಳಿಸಿದೆ. ಮೊಸರು 200 ಗ್ರಾ ರೂ.10 ರಿಂದ 12 ರೂ ಆಗಲಿದೆ. 500 ಗ್ರಾ, ರೂ.22 ರಿಂದ 24 ರೂ ಆಗಲಿದೆ. ಮಜ್ಜಿಗೆ ಸ್ಯಾಚೆ 200 ಮಿಲಿ ರೂ.7 ಇದ್ದದ್ದು 8 ರೂ ಆಗಲಿದೆ. ಟೆಟ್ರಾ ಪ್ಯಾಕ್ 10ರೂ ನಿಂದ 11 ರೂ ಗೆ ಏರಿಕೆಯಾಗಲಿದೆ. ಪೆಟ್ ಬಾಟಲ್ ರೂ.12 ರಿಂದ 13 ರೂ ಗೆ ಹೆಚ್ಚಳವಾಗಲಿದೆ. ಇನ್ನೂ ಲಸ್ಸಿ 200 ಮಿಲಿ ಸ್ಯಾಚೆ ರೂ.10ರಿಂದ 11 ಗೆ ಏರಿಕೆಯಾಗಲಿದೆ. ಟೆಟ್ರಾ ಪ್ಯಾಕ್ ಸಾದ ರೂ.20 ರಿಂದ 21, ಟೆಟ್ರಾ ಪ್ಯಾಕ್ ಮ್ಯಾಂಗೋ ರೂ.25 ರಿಂದ 27, ಪೆಟ್ ಬಾಟಲ್ ಸಾದ ರೂ.15 ರಿಂದ 16 ಹಾಗೂ ಪೆಟ್ ಬಾಟಲ್ ಮ್ಯಾಂಗೋ ರೂ.20 ರಿಂದ 21 ರೂಪಾಯಿ ಹೆಚ್ಚಳವಾಗಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.