



ಬೆಂಗಳೂರು;
ರಾಜ್ಯದಲ್ಲಿ ನಡೆದ ಕೆಲವು ವಿದ್ಯಮಾನಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಗಸ್ಟ್ 4ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಬಳಿಕ, ಬಿಜೆಪಿ ಕಾರ್ಯಕರ್ತರು ಪಕ್ಷದ ವಿರುದ್ಧವೇ ಸಿಡಿದೆದ್ದ
ಹಿನ್ನಲೆಯಲ್ಲಿ ಅಮಿತ್ ಶಾ ರಾಜ್ಯಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಂಗಳೂರಿಗೂ ಭೇಟಿ ನೀಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ರಾಜ್ಯಕ್ಕೆ ಭೇಟಿ ನೀಡಲಿರುವ ಅಮಿತ್ ಶಾ
ಅವರು ಸರಕಾರದ ನಡೆ ಹಾಗೂ ನಾಯಕರ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ .ಮಂಗಳವಾರ ಸಂಜೆಯೊಳಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ಅಧಿಕೃತವಾಗಿ ಘೋಷಣೆಯಾಗಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.