logo
WhatsApp Image 2026-04-02 at 14.46.04.jpeg
hindalco everlast.jpeg

ಹಳದಿ ರೋಗಕ್ಕೆ ಊರು ಬಿಟ್ಟ ಮಲೆನಾಡ ರೈತರು

ಟ್ರೆಂಡಿಂಗ್
share whatsappshare facebookshare telegram
25 Aug 2023
post image

ಚಿಕ್ಕಮಗಳೂರು: ನಿತ್ಯ ನೂರಾರು ಜನರಿಗೆ ಅನ್ನ ಹಾಕುತ್ತಿದ್ದ ಮಲೆನಾಡ ಪುರಾತನ ಮನೆಗಳಿಂದು ಪಾಳುಬಿದ್ದಿವೆ.

ಅಡಿಕೆಗೆ ತಗುಲಿರುವ ಹಳದಿ ಎಲೆ ರೋಗವನ್ನ ನಿಯಂತ್ರಿಸಲಾಗದೆ ಮಲೆನಾಡ ನೂರಾರು ಜನ ಶತಮಾನಗಳಿಂದ ಬದುಕಿ-ಬಾಳಿದ್ದ ಮನೆಗಳನ್ನ ಬಿಟ್ಟು ಊರುಗಳನ್ನೇ ಬಿಡುತ್ತಿದ್ದಾರೆ.

ಕೊಪ್ಪ ತಾಲೂಕಿನ ಜಯಪುರ ಸಮೀಪದ ಹುಲಿಗರಡಿ ಗ್ರಾಮದಲ್ಲಿ ಸುಮಾರು 25 ಮನೆಗಳಿವೆ. 25 ಮನೆಗಳಲ್ಲಿ 7ಕ್ಕೂ ಹೆಚ್ಚು ಮನೆಗಳು ಪಾಳುಬಿದ್ದಿರುವ ಸ್ಥಿತಿಗೆ ಬಂದಿದೆ. 3-5 ಎಕರೆ ಅಡಿಕೆ ತೋಟದಲ್ಲಿ ಬದುಕಿದ್ದ ಸಣ್ಣ ಬೆಳೆಗಾರರು. ಆದರೆ, ಇಂದು 7ಕ್ಕೂ ಹೆಚ್ಚು ಕುಟುಂಬಗಳು ಊರನ್ನೇ ಖಾಲಿ ಮಾಡಿದ್ದಾರೆ. ಕಾರಣ ಹಳದಿ ಎಲೆ ರೋಗ.

ಐದು ದಶಕಗಳಿಂದ ದಿನದಿಂದ ದಿನಕ್ಕೆ ಹೆಚ್ಚುತ್ತಿರೋ ಹಳದಿ ಎಲೆ ರೋಗ ಬೆಳೆಗಾರರಿಗೆ ಕೃಷಿ ಬಗ್ಗೆಯೇ ಬೇಜಾರು ಮೂಡಿಸಿದೆ. ಕಿವಿಗೆ ಬಿದ್ದ ಔಷಧಿಯನ್ನೆಲ್ಲಾ ಸಿಂಪಡಿಸಿದರು ಶೃಂಗೇರಿ-ಕೊಪ್ಪ-ಎನ್.ಆರ್.ಪುರ ತಾಲೂಕಿನ ಹಲವು ಭಾಗದಲ್ಲಿ ಹಳದಿ ಎಲೆ ಹಾಗೂ ಎಲೆಚುಕ್ಕಿ ರೋಗ ಪಾರುಪತ್ಯ ಮರೆಯುತ್ತಿದೆ.

ಸಂಶೋಧನ ಕೇಂದ್ರಕ್ಕೆ ಔಷಧಿ ಸಂಶೋಧನೆಗೆಂದು ಬಂದ ಕೋಟಿಗಟ್ಟಲೇ ಹಣವನ್ನು ಹಳದಿ ಎಲೆ ರೋಗವೇ ತಿಂದು ಹಾಕಿದೆ. ಬ್ಯಾಂಕ್ ಸಾಲದ ಜೊತೆ ಅಡವಿಟ್ಟ ಹೆಂಡತಿ ಮಕ್ಕಳ ಓಡವೆಯನ್ನ ಬಿಡಿಸೋಕು ಆಗದ ಸಂದಿಗ್ಧ ಪರಿಸ್ಥಿತಿಗೆ ಬೆಳೆಗಾರರು ಬಂದಿದ್ದಾರೆ. ಹಾಗಾಗಿ, ಸಾಲದ ಶೂಲಕ್ಕೆ ಸಿಕ್ಕ ಬೆಳೆಗಾರರು ಹೊರಬರಲಾಗದೆ ಬದುಕುವ ಅನಿವಾರ್ಯತೆಗೆ ಊರುಬಿಟ್ಟು ಸಿಕ್ಕ-ಸಿಕ್ಕ ಕೆಲಸ ಮಾಡುತ್ತಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.