logo
WhatsApp Image 2026-04-02 at 14.46.04.jpeg
hindalco everlast.jpeg

ಉಪ್ಪಿನಂಗಡಿ: ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ..!

ಟ್ರೆಂಡಿಂಗ್
share whatsappshare facebookshare telegram
15 Feb 2024
post image

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ. ಸುಮಾರು ಒಂದೂವರೆ ತಿಂಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದ ಅತ್ತಾವುಲ್ಲಾ ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದು, ಫೆ.14 ರಂದು ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಆದ್ರೆ ವಾಪಸ್ಸು ಮನೆಗೆ ಬಂದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಂದುಬಂದಿದೆ.

ಈತ ಯಾವುದೋ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಹೊರತು ಆತನ ಮರಣದಲ್ಲಿ ಯಾವುದೇ ಸಂಶಯ ಇರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. . ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಯುಡಿಆರ್ ನಂಬ್ರ 03/2024 ಕಲಂ:174 CRPC ರಂತೆ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.