



ಉಪ್ಪುಂದ: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದಲ್ಲಿ ಅ.7 ಬೆಳಿಗ್ಗೆ ಬೆಳಕಿಗೆ ಬಂದಿದೆ. ಉಪ್ಪುಂದ ಗ್ರಾಮದ 71 ವರ್ಷದ ನಾರಾಯಣ ಪೂಜಾರಿ ಆತ್ಮಹತ್ಯೆಗೆ ಶರಣಾದ ವೃದ್ಧ. ಇವರು ಪೊಲೀಯೋ ಪೀಡಿತರಾಗಿದ್ದು, ಸುಮಾರು 2 ವರ್ಷದ ಹಿಂದೆ ಜಾರಿ ಬಿದ್ದ ಪರಿಣಾಮ ಬಲಕಾಲಿಗೆ ಆಪರೇಷನ್ ಆಗಿತ್ತು. ಆ ಬಳಿಕ ಸರಿಯಾಗಿ ನಡೆದಾಡಲು ಆಗುತ್ತಿರಲಿಲ್ಲ. ಇದೇ ಕಾರಣದಿಂದ ಜೀವನದಲ್ಲಿ ಮಾನಸಿಕವಾಗಿ ನೊಂದು ಆ.6ರ ರಾತ್ರಿಯಿಂದ ಆ. 7ರಂದು ಬೆಳಿಗ್ಗೆ 7 ಗಂಟೆಯ ಮಧ್ಯಾವಧಿಯಲ್ಲಿ ಮನೆಯ ತೋಟದಲ್ಲಿರುವ ಆವರಣವಿಲ್ಲದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.