logo
WhatsApp Image 2026-04-02 at 14.46.04.jpeg
hindalco everlast.jpeg

ಉಪ್ಪೂರು : ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಆಟೊ ರಿಕ್ಷಾ: ಚಾಲಕ ಸಾವು

ಟ್ರೆಂಡಿಂಗ್
share whatsappshare facebookshare telegram
24 Aug 2022
post image

ಬ್ರಹ್ಮಾವರ: ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಆಟೊ ರಿಕ್ಷಾವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ‌ ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಅಮ್ಮುಜೆ ರೈಲ್ವೆ ಒವರ್ ಬ್ರಿಡ್ಜ್ ಬಳಿ‌ ಆ.23ರಂದು ನಡೆದಿದೆ. ಮೃತನನ್ನು‌ ಆಟೊ ಚಾಲಕ 53 ವರ್ಷದ ಗಣೇಶ್ ಪೂಜಾರಿ ಮೃತದುರ್ದೈವಿ. ಇವರು ತನ್ನ ಆಪೇ ಆಟೊ ರಿಕ್ಷಾವನ್ನು ಹಾವಂಜೆ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದು, ಅಮ್ಮುಜೆ ರೈಲ್ವೆ ಒವರ್ ಬ್ರಿಡ್ಜ್ ನ ಸ್ವಲ್ಪ ಮುಂದೆ ನಾಯಿಯೊಂದು ರಸ್ತೆಗೆ ಅಡ್ಡ ಬಂದಿದೆ. ಇದನ್ನು ತಪ್ಪಿಸಲು ಹೋದಂತ ವೇಳೆ ನಿಯಂತ್ರಣ ತಪ್ಪಿದ ರಿಕ್ಷಾ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಗಣೇಶ್ ಅವರನ್ನು‌ ಉಡುಪಿಯ ಹೈಟೆಕ್ ಆಸ್ಪತ್ರೆಗೆ ಕರೆದುಕೊಂಡುಕರೆದುಕೊಂಡು ಹೋಗಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಅಲ್ಲಿ ಪರೀಕ್ಷಿಸಿದ ವೈದ್ಯರು ಗಣೇಶ್ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.